10ನೇ ತರಗತಿಯ ಪಾಸಾದವರಿಗೆ ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಉದ್ಯೋಗ ಅವಕಾಶ..

0
468

ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿ ಪ್ರಕಟಣೆ ಹೊರಡಿಸಿ. 420 ಫಿಟ್ಟರ್, ಇಲೆಕ್ಟ್ರೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ಫೆಬ್ರವರಿ 10,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುವರ್ಣಾವಕಾಶ..!!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಫಿಟ್ಟರ್, ಇಲೆಕ್ಟ್ರೀಶಿಯನ್,ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಸ್ಟ್ ಮತ್ತು ಅಕೌಂಟೆಂಟ್

ಸಂಸ್ಥೆ (Organisation): ಭಾರತೀಯ ತೈಲ ನಿಗಮ

ವಿದ್ಯಾರ್ಹತೆ: (Educational Qualification): ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯ ಜೊತೆ ಐಟಿ,ಡಿಪ್ಲೋಮ,ಪದವಿ ಅಥವಾ ಸಮನಾದ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಮಾಡಿರಬೇಕು.

ವಯೋಮಿತಿ (Age): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date); ಫೆಬ್ರವರಿ 10,2019

ಹೆಚ್ಚಿನ ಮಾಹಿತಿಗಾಗಿ: https://www.iocl.com/download/Notification-Southern-Region-for-the-year-2019-2020.pdf ಕ್ಲಿಕ್ ಮಾಡಿ.