800 ವರ್ಷಗಳ ಪದ್ಧತಿಗೆ ತೆರೆ; ಶಬರಿಮಲೆ ದೇಗುಲಕ್ಕೆ ಮಹಿಳೆಯರೂ ಪ್ರವೇಶಿಸಬಹುದು..!!

0
350

800 ವರ್ಷಗಳ ಪದ್ಧತಿ ತೆರೆ ಎಳೆಯಲಾಗಿದ್ದು ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂಕೋರ್ಟ್ ನ ಸಿಜೆ ದೀಪಕ್ ಮಿಶ್ರಾ ಸೇರಿದಂತೆ ಪಂಚ ಪೀಠ ನ್ಯಾಯಾಧೀಶರು ಪ್ರತ್ಯೇಕ ತೀರ್ಪನ್ನು ನೀಡಿದ್ದಾರೆ. ಮಹಿಳೆಯರೂ ಯಾವಾಗಲೂ ತಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದಾರೆ. ಮಹಿಳೆಯರನ್ನು ದುರ್ಬರಂತೆ ನೋಡಬಾರದು. ಭಾರತದಲ್ಲಿ ಮಹಿಳೆಯರಿಗೆ ದೇವತೆಯ ಸ್ಥಾನ ನೀಡಲಾಗಿದೆ. ಮಹಿಳೆಯರ ಕುರಿತು ಸಮಾಜದ ಗ್ರಹಿಕೆ ಬದಲಾಗಬೇಕು ಎಂದು ಸಿಜೆ ದೀಪಕ್ ಮಿಶ್ರಾ ಹೇಳಿ, ದೇವಸ್ತಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ್ದಾರೆ.

ಶಬರಿಮಲೆ ದೇಗುಲಕ್ಕೆ 10 ರಿಂದ 50 ವರ್ಷದ ಮಹಿಳೆಯರಿಗೂ ಪ್ರವೇಶ ನೀಡಲು ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾ| ದೀಪಕ್‌ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ಆಗಸ್ಟ್ 1ಕ್ಕೆ ತೀರ್ಪು ಕಾಯ್ದಿರಿಸಿತ್ತು. 2006ರಲ್ಲಿ ಇಂಡಿಯನ್‌ ಯಂಗ್‌ ಲಾಯರ್ಸ್‌ ಅಸೋಸಿಯೇಶನ್‌ ಹಾಗೂ ಇತರರು ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. 2016ರ ಜನವರಿಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಕಳೆದ ಅಕ್ಟೋಬರ್ 13ರಂದು ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಲಾಗಿತ್ತು.

ಈಗಾಗಲೇ ಹಿಂದಿನ ಹಲವು ವಿಚಾರಣೆ ವೇಳೆ ಮಹಿಳೆಯರ ಪ್ರವೇಶದ ಪರವಾಗಿ ಮಾತನಾಡಿರುವ ಸುಪ್ರೀಂ ಕೋರ್ಟ್, ಪುರುಷರಂತೆ ಮಹಿಳೆರಿಗೂ ಸಮಾನವಾಗಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಹೇಳಿತ್ತು. ಎಲ್ಲೆಲ್ಲಿ ಪುರುಷರು ಹೋಗಬಹುದೋ ಅಲ್ಲಿಗೆ ಮಹಿಳೆಯರೂ ತೆರಳಬಹುದು. ಪುರುಷರಿಗೆ ಅನ್ವಯಿಸುವ ಸಂಗತಿಗಳೆಲ್ಲವೂ ಮಹಿಳೆಯರಿಗೂ ಅನ್ವಯಿಸುತ್ತವೆ. ದೇಗುಲಕ್ಕೆ ಪ್ರವೇಶಿಸುವುದು ಶಾಸನವನ್ನು ಆಧರಿಸಿಲ್ಲ. ಇದು ಸಾಂವಿಧಾನಿಕ ಹಕ್ಕು. ಇದಕ್ಕೆ ಸಂಬಂಧಿಸಿದಂತೆ ಸಂವಿಧಾನದ 25 ಹಾಗೂ 26ನೇ ಕಲಂನಲ್ಲಿ ವಿವರಿಸಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ದೇಗುಲದಲ್ಲಿ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿ ಸುಪ್ರೀ ಕೋರ್ಟ್ ನೀಡಿರುವ ತೀರ್ಪನ್ನು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿ ಮಾತನಾಡಿದ ಅವರು, ಇದು ಮಹಿಳಾ ಸಮುದಾಯಕ್ಕೆ ಸಿಕ್ಕ ಜಯ. ದೇಶದಲ್ಲಿ ಎಷ್ಟೋ ಕಡೆ ಅಸ್ಪೃಷ್ಯರಿಗೆ ದೇವಾಲಯ ಪ್ರವೇಶ ನಿಷಿದ್ಧವಾಗಿದೆ. ಈ ನಿಟ್ಟಿನಲ್ಲಿ ದೇಶದಲ್ಲಿ ಸಮಾನತೆ ಕಾಪಾಡುವುದು ಅಗತ್ಯವಿದೆ. ಪುರುಷರಂತೆ ಮಹಿಳೆರಿಗೂ ಸಮಾನವಾಗಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಹೇಳಿತ್ತು. ಎಲ್ಲೆಲ್ಲಿ ಪುರುಷರು ಹೋಗಬಹುದೋ ಅಲ್ಲಿಗೆ ಮಹಿಳೆಯರೂ ತೆರಳಬಹುದು. ಪುರುಷರಿಗೆ ಅನ್ವಯಿಸುವ ಸಂಗತಿಗಳೆಲ್ಲವೂ ಮಹಿಳೆಯರಿಗೂ ಅನ್ವಯಿಸುತ್ತವೆ. ದೇಗುಲಕ್ಕೆ ಪ್ರವೇಶಿಸುವುದು ಶಾಸನವನ್ನು ಆಧರಿಸಿಲ್ಲ. ಇದು ಸಾಂವಿಧಾನಿಕ ಹಕ್ಕು. ಇದಕ್ಕೆ ಸಂಬಂಧಿಸಿದಂತೆ ಸಂವಿಧಾನದ 25 ಹಾಗೂ 26ನೇ ಕಲಂನಲ್ಲಿ ವಿವರಿಸಲಾಗಿದೆ ಇದಕ್ಕೆ ಪೂರಕವಾಗಿ ಸುಪ್ರಿಂ ಕೊರ್ಟ್ ಕೊಟ್ಟ ತೀರ್ಪು ಆಶಾದಾಯಕ ಬೆಳೆವಣಿಗೆಯಾಗಿದೆ. ಮಹಿಳಾ ಸಮುದಾಯಕ್ಕೆ ಸಂದ ಜಯವಾಗಿದೆ ಎಂದು ಹೇಳಿದರು.