ಭಾರತವನ್ನು ಕೆಣಕಿದ ಪಾಕಿಸ್ತಾನ ಕಪ್ಪುಪಟ್ಟಿಗೆ ಸೇರ್ಪಡೆ; ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮುಖಭಂಗ.!

0
224

ನಿದ್ದೆಯಲ್ಲಿವೂ ಭಾರತವನ್ನು ಕೆಣಕುತ್ತಿರುವ ಪಾಕ್ ಕಪ್ಪುಪಟ್ಟಿಗೆ ಸೇರಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಹೊಡೆತ ಬಿದ್ದಿದೆ, ಉಗ್ರ ಪೋಷಣೆ ಮಾಡುವ ಆರೋಪದಲ್ಲಿ ಜಾಗತಿಕ ಸರ್ವೇಕ್ಷಣಾ ಸಂಸ್ಥೆ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಿದೆ. ಇದೀಗ ಏಷಿಯಾ ಫೆಸಿಫಿಕ್ ಗ್ರೂಫ್ ಆಫ್ ದ ಫೈನಾಶ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್(ಎಫ್ ಎಟಿಎಫ್) ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಏಕೆಂದರೆ ಪಾಕಿಸ್ತಾನ ಉಗ್ರಗಾಮಿ ಸಂಘಟನೆಗಳ ವಿರುದ್ಧ ಕೈಗೊಂಡಿದ್ದ ಕ್ರಮಗಳು ಫತ್ಫ್’ನ ನ ಮಾನದಂಡಕ್ಕೆ ಸಮವಾಗಿಲ್ಲದ ಕಾರಣಕ್ಕೆ ಸಂಸ್ಥೆ ಈ ನಿರ್ಣಯ ಕೈಗೊಂಡಿದೆ ಎನ್ನಲಾಗಿದೆ.

ಪಾಕಿಸ್ತಾನಕ್ಕೆ ಕಪ್ಪು ಪಟ್ಟಿ?

ಜೂನ್ ನಲ್ಲಿ ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಎಫ್‍ಎಟಿಎಫ್ ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಅಕ್ಟೋಬರ್ ಒಳಗಡೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು. ಈಗ ಆಸ್ಟ್ರೇಲಿಯಾದಲ್ಲಿ ನಡೆದ ಎಫ್‍ಎಟಿಎಫ್ ನ ಏಷ್ಯಾ ಪೆಸಿಫಿಕ್ ವಲಯದ ವಾರ್ಷಿಕ ಸಭೆಯಲ್ಲಿ ಕಪ್ಪು ಪಟ್ಟಿಗೆ ಸೇರಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. 40 ಮಾನದಂಡಗಳನ್ನು ಎಫ್‍ಟಿಎಫ್ ನೀಡಿತ್ತು. 40ರ ಪೈಕಿ 32 ಮಾನದಂಡಗಳಲ್ಲಿ ಪಾಕಿಸ್ತಾನ ವಿಫಲವಾಗಿದೆ. ಆದರಲ್ಲೂ ಪ್ರಮುಖವಾದ 11 ಮಾನದಂಡ ಪೈಕಿ 10 ರಲ್ಲಿ ಫೇಲ್ ಆಗಿದೆ. ಹೀಗಾಗಿ ಏಷ್ಯಾ ಪೆಸಿಫಿಕ್ ವಲಯ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಬಹುದು ಎನ್ನುವ ತೀರ್ಮಾನಕ್ಕೆ ಬಂದಿದೆ.

ಏನಿದು ಕಪ್ಪು ಪಟ್ಟಿ?

ಎಫ್‍ಎಟಿಎಫ್ ನಿಗದಿ ಪಡಿಸಿದ ಮಾನದಂಡಕ್ಕೆ ಅನುಗುಣವಾಗಿ ಕೆಲಸ ಮಾಡದೇ ಇದ್ದರೆ ಗ್ರೇ ಪಟ್ಟಿಯಲ್ಲಿರುವ ದೇಶವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ. ಪುಲ್ವಾಮಾ ದಾಳಿಯಾದ ನಂತರ ಪಾಕಿಸ್ತಾನವನ್ನು ಯಾವುದೇ ಕಾರಣಕ್ಕೂ ಗ್ರೇ ಪಟ್ಟಿಯಿಂದ ಹೊರಗಡೆ ಇಡಬಾರದು ಎಂದು ಭಾರತ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಫ್ರಾನ್ಸ್ ಸಹ ಪಾಕಿಸ್ತಾನವನ್ನು ಗ್ರೇ ಪಟ್ಟಿಯಲ್ಲೇ ಇರಿಸುವಂತೆ ಎಫ್‍ಎಟಿಎಫ್ ಮೇಲೆ ಒತ್ತಡ ಹಾಕಿತ್ತು. ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದ ಒತ್ತಡ ಜಾಸ್ತಿಯಾದ ಹಿನ್ನೆಲೆಯಲ್ಲಿ ಎಫ್‍ಎಟಿಎಫ್ ಪಾಕಿಸ್ತಾನವನ್ನು ಮುಂದಿನ ಅಕ್ಟೋಬರ್ ವರೆಗೆ ಗ್ರೇ ಪಟ್ಟಿಯಲ್ಲಿ ಮುಂದುವರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಗ್ರೇ ಪಟ್ಟಿಯಿಂದ ಹೊರಗೆ ಬರಲು ಪಾಕಿಸ್ತಾನ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮನವಿ ಮಾಡಿತ್ತು. ಆದರೆ ಪಾಕ್ ಮನವಿಯನ್ನು ಇತರೇ ರಾಷ್ಟ್ರಗಳು ಗಂಭೀರವಾಗಿ ಸ್ವೀಕರಿಸಿರಲಿಲ್ಲ.

ಕಪ್ಪು ಪಟ್ಟಿಯಿಂದ ಏನಾಗುತ್ತೆ ಪರಿಣಾಮ?

ಫುಟ್ ಬಾಲ್ ಪಂದ್ಯಗಳಲ್ಲಿ ತಪ್ಪು ಮಾಡಿದ ಆಟಗಾರಿಗೆ ಹೇಗೆ ಹಳದಿ ಕಾರ್ಡ್ ನೀಡಿ ಎಚ್ಚರಿಕೆ ನೀಡುತ್ತಾರೋ ಅದೇ ರೀತಿಯಾಗಿ ರಾಷ್ಟ್ರವೊಂದಕ್ಕೆ ಮೊದಲ ಎಚ್ಚರಿಕೆ ನೀಡಲು ಈ ಪಟ್ಟಿಗೆ ಸೇರಿಸಲಾಗುತ್ತದೆ. ಗ್ರೇ ಪಟ್ಟಿಗೆ ಒಂದು ದೇಶ ಸೇರಿದರೆ ಅದಕ್ಕೆ ಹಲವು ಸಮಸ್ಯೆಗಳಾಗುತ್ತದೆ. ವಿವಿಧ ಹಣಕಾಸು ಸಂಸ್ಥೆಗಳು(ಐಎಂಎಫ್, ವಿಶ್ವಬ್ಯಾಂಕ್) ಸಾಲ ನೀಡಲು ಹಿಂದೇಟು ಹಾಕಬಹುದು. ಆರ್ಥಿಕ ನಿರ್ಬಂಧ ಹೇರಬಹುದು. ರಾಷ್ಟ್ರಗಳು ವ್ಯಾಪಾರವನ್ನು ಕಡಿತಗೊಳಿಸಬಹುದು. ರೇಟಿಂಗ್ ಏಜೆನ್ಸಿಗಳು ದೇಶಕ್ಕೆ ಕಡಿಮೆ ರೇಟಿಂಗ್ ಕೊಡಹುದು.