370ನೇ ವಿಧಿ ರದ್ದುಗೊಳಿಸಿದ ಬಗ್ಗೆ ಮತ್ತೆ ಖ್ಯಾತೆ ತೆಗೆದ ಪಾಕಿಸ್ತಾನ; ಆದೇಶವನ್ನು ತಿರಸ್ಕರಿಸುವಂತೆ ವಿಶ್ವಸಂಸ್ಥೆಗೆ ಪತ್ರ.!

0
74

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನ 370ನೇ ವಿಧಿಯನ್ನು ರದ್ದು ಮಾಡಿದ ನಂತರ ಪಾಕ್ ಭಾರತದ ಮೇಲೆ ಹಲವು ಬೇದರಿಕೆ ನೀಡಿತ್ತು, ಯಾವುದಕ್ಕೂ ಭಾರತ ಹೆದರದಿದ್ದಾಗ ಪಾಕಿಸ್ತಾನಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಅವಮಾನವಾಗಿ ನಂತರ 370ನೇ ವಿಧಿ ರದ್ದುಗೊಳಿಸಿದ ಬಗ್ಗೆ ಪ್ರವೇಶ ಮಾಡುವುದಿಲ್ಲವೆಂದು ಹೇಳಿತ್ತು, ಈಗ ಮತ್ತೆ ನಾಯಿ ಬುದ್ದಿ ತೋರಿಸಲು ಮುಂದಾದ ಪಾಕ್ ವಿಶ್ವಸಂಸ್ಥೆಗೆ ಪತ್ರ ಬರೆದು ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದೆ.

Also read: ಕಪ್ಪು ಹಣ ತಡೆಯಲು ಮೋದಿ ಸರ್ಕಾರದಿಂದ ಮತ್ತೊಂದು ಪ್ರಯತ್ನ?? ಕಪ್ಪು ಹಣ, ಬೇನಾಮಿ ಆಸ್ತಿಗಳ ಮೇಲೆ ಸರ್ಜಿಕಲ್ ಸ್ಟ್ರೈಕ್??

ಹೌದು ಭಾರತ ಸರಕಾರವು ಜಮ್ಮು-ಕಾಶ್ಮೀರದ ವಿಶೇಷಾಧಿಕಾರ ರದ್ದುಗೊಳಿಸಿದ ವಿಚಾರವಾಗಿ ಮತ್ತೊಮ್ಮೆ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಶಿ ಪತ್ರ ಬರೆದಿದ್ಧಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರ್ರೆಸ್​​ಗೆ ಬರೆದ ಪತ್ರದಲ್ಲಿ “370ನೇ ವಿಧಿ ರದ್ದುಗೊಳಿಸಿ ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿದ ಭಾರತದ ಅಕ್ರಮ ಆದೇಶ ತಿರಸ್ಕರಿಸಿ” ಎಂದು ಖುರೇಷಿ ಆಗ್ರಹಿಸಿದ್ಧಾರೆ.

Also read: 2011ರ ವಿಶ್ವಕಪ್‍ ಫೈನಲ್-ನಲ್ಲಿ ಗೌತಮ್ ಗಂಭೀರ್ 3 ರನ್ ಹೊಡೆಯದೆ ಶತಕ ವಂಚಿತರಾಗಲು ಮಹೇಂದ್ರ ಸಿಂಗ್ ಧೋನಿ ಕಾರಣವಂತೆ.!

ಜಮ್ಮು ಮತ್ತು ಕಾಶ್ಮೀರ ನಮ್ಮ ಆಂತರಿಕ ವಿಚಾರವಾಗಿದ್ದು, ಈ ವಿಚಾರದಲ್ಲಿ ಯಾವುದೇ ದೇಶ ಮಧ್ಯ ಪ್ರವೇಶಿಸಬಾರದು ಎಂದು ಭಾರತ ಬಹಳ ಹಿಂದಿನಿಂದಲೂ ಹೇಳುತ್ತಲೇ ಬರುತ್ತಿದೆ. ಆದರೂ, ಈ ವಿಚಾರದಲ್ಲಿ ಪಾಕಿಸ್ತಾನ ಮೂಗು ತೂರಿಸುತ್ತಲೇ ಇದೆ. ಜಮ್ಮು ಮತ್ತು ಕಾಶ್ಮೀರ ವಿಚಾರವನ್ನು ವಿಶ್ವಸಂಸ್ಥೆ ಮೊದಲಾದ ಅಂತರಾಷ್ಟ್ರೀಯ ವೇದಿಕೆಯ ಮುಂದೆ ತರಲು ಪಾಕಿಸ್ತಾನ ಮೊದಲಿನಿಂದಲೂ ಪ್ರಯತ್ನಿಸುತ್ತಲೇ ಇದೆ. ಆದರೆ, ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರಿವನ್ನ ಭಾರತ ಸರ್ಕಾರ ರದ್ದುಗೊಳಿಸಿದ ಬಳಿಕ ಪಾಕಿಸ್ತಾನದ ಕೋಪ ಮತ್ತಷ್ಟು ಹೆಚ್ಚಾಗುವಂತಾಗಿದ್ದು, ಈ ವಿಚಾರವನ್ನು ವಿಶ್ವಸಂಸ್ಥೆ ಮೊದಲಾದ ಅಂತಾರಾಷ್ಟ್ರೀಯ ವೇದಿಕೆಯ ಮುಂದೆ ತರಲು ಪಾಕಿಸ್ತಾನ ಮೊದಲಿಂದಲೂ ಪ್ರಯತ್ನಿಸುತ್ತಲೇ ಇದೆ.

ಆದರೆ, ಜಮ್ಮು-ಕಾಶ್ಮೀರದ ವಿಶೇಷಾಧಿಕಾರವನ್ನ ಭಾರತ ಸರ್ಕಾರ ರದ್ದುಗೊಳಿಸಿದ ಬಳಿಕ ಪಾಕಿಸ್ತಾನಕ್ಕೆ ಇನ್ನಷ್ಟು ಜೋರು ಧ್ವನಿಯಲ್ಲಿ ಮಾತನಾಡಲು ಅನುವಾಗಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಈ ವಿಚಾರ ಚರ್ಚೆಯಾಗಬೇಕೆಂದು ಪಾಕಿಸ್ತಾನ ಮನವಿ ಕೂಡ ಮಾಡಿಕೊಂಡಿತು. ಅದಕ್ಕಾಗಿ ಚೀನಾದ ಮೂಲಕ ಲಾಬಿಯನ್ನೂ ಮಾಡಿಸಿತು. ಚೀನಾದ ಪ್ರಯತ್ನದಿಂದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕೊನೆಗೂ ಕ್ಲೋಸ್ಡ್ ಡೋರ್ ಕನ್​ಸಲ್ಟೇಷನ್ಸ್ ಸಭೆಯೂ ನಡೆಯಿತು. ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಕೈಮೀರಿ ಹೋಗದಂತಹ ಚಟುವಟಿಕೆಗಳನ್ನ ನಡೆಸಬಾರದು.

Also read: ಈ ಎರಡು ಪಕ್ಷಗಳನ್ನು ನೋಡಿ ಬಿಜೆಪಿ ಪಾಠ ಕಲಿಯಬೇಕು; ನರೇಂದ್ರ ಮೋದಿ ಹೊಗಳಿದ ಪಕ್ಷಗಳು ಯಾವವು?

ವಿಶ್ವಸಂಸ್ಥೆ ನಿಯಮದ ಪ್ರಕಾರ ರಚನೆಯಾದ ದ್ವಿಪಕ್ಷೀಯ ಒಪ್ಪಂದದ ಆಶಯದಂತೆ ನೇರ ಮಾತುಕತೆ ಮೂಲಕ ಶಾಂತಿಯುತವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಭಾರತ ಮತ್ತು ಪಾಕಿಸ್ಥಾನಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಈಗಾಗಲೇ ಆದೇಶಿಸಿದೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 35ಎ ಮತ್ತು 370ನೇ ವಿಧಿಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಹಾಗೆಯೇ ಕಣಿವೆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ. ಇವುಗಳಿಗೆ ಸಂಸತ್​ನ ಎರಡೂ ಸದನಗಳಲ್ಲಿ ಅನುಮೋದನೆಯೂ ಸಿಕ್ಕಿದೆ. ಈಗಾಗಲೇ ರಾಷ್ಟ್ರಪತಿಗಳ ಅಂಕಿತದೊಂದಿಗೆ ಅಧಿಕೃತವಾಗಿ ಚಾಲನೆಗೆ ಬಂದಿದೆ. ಇಷ್ಟಾದರೂ ಪಾಕ್ ಭಾತದ ಏಳಿಗೆಯನ್ನು ಸಹಿಸಲು ಆಗದ ಪಾಕ್ ವಿಶ್ವ ಸಂಸ್ಥೆಗೆ ಪತ್ರ ಬರೆದಿದೆ.