ಹಬ್ಬದ ಪ್ರಯಕ್ತ ಸುಲಿಗೆಗೆ ನಿಂತ ಬಸ್‍ಗಳು; ಬಿ.ಎಸ್.ಯಡಿಯೂರಪ್ಪ ಅವರಿಗೆ ಬಸ್ ಟಿಕೆಟ್ ಬುಕ್ ಮಾಡಿ ದೀಪಾವಳಿ ಹಬ್ಬಕ್ಕೆ ಆಹ್ವಾನಿಸಿದ ಪ್ರಯಾಣಿಕ.!

0
186

ಹಬ್ಬದ ದಿನಗಳಲ್ಲಿ ಸರ್ಕಾರಿ ಬಸ್ ಸೇರಿದಂತೆ, ಖಾಸಗಿ ಬಸ್ ನವರು 3 ಪಟ್ಟು ಸುಲಿಗೆ ಮಾಡಿ. ಪ್ರಯಾಣಿಕರಿಗೆ ಹೋರೆ ಮಾಡುವುದು ಹೊಸದೇನಲ್ಲ, ಹಬ್ಬಕೆ ರಜೆ ಏನೋ ಇರುತ್ತೆ ಆದರೆ ಊರು ಸೇರಿ ಮತ್ತೆ ಬೆಂಗಳೂರಿಗೆ ಬರಬೇಕು ಎಂದರೆ ಒಂದು ತಿಂಗಳ ಸಂಬಳವೆ ಬೇಕಾಗುತ್ತೆ, ಇದೇ ವಿಚಾರಕ್ಕೆ ಕಳೆದ ವರ್ಷ ಸಾರಿಗೆ ಸಚಿವರು ಹೆಚ್ಚಿನ ದರ ವಿಧಿಸುವ ಬಸ್-ಗಳ ಪರವಾನಗಿಯನ್ನು ರದ್ದು ಮಾಡಲಾಗುತ್ತೆ ಎಂದು ಸೂಚಿಸಿದ ನಂತರ ಸ್ವಲ್ಪ ರೀತಿಯಲ್ಲಿ ದರ ಕಡಿಮೆಯಾಗಿತ್ತು. ಆದರೆ ಈ ವರ್ಷ ಅಂತಹ ಯಾವುದೇ ನಿಯಮ ವಿಲ್ಲದ ಕಾರಣ ಪ್ರಯಾಣಿಕರೊಬ್ಬರು ಮುಖ್ಯಮಂತ್ರಿಗಳಿಗೆ ಟಿಕೆಟ್ ಬುಕ್ ಮಾಡಿದ್ದಾರೆ.

ಮುಖ್ಯಮಂತ್ರಿಗಳಿಗೆ ಬಸ್ ಟಿಕೆಟ್?

ಹೌದು ದೀಪಾವಳಿ ಹಬ್ಬದ ದಿನಗಳಲ್ಲಿ ಖಾಸಗಿ ಬಸ್‍ಗಳ ದುಬಾರಿ ಪ್ರಯಾಣದ ದರದಿಂದ ಕಂಗೆಟ್ಟಿರುವ ಉತ್ತರ ಕನ್ನಡ ಜಿಲ್ಲೆಯ ಪ್ರಯಾಣಿಕರೊಬ್ಬರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಸ್ ಟಿಕೆಟ್ ಬುಕ್ ಮಾಡಿ ದೀಪಾವಳಿ ಹಬ್ಬಕ್ಕೆ ಆಹ್ವಾನಿಸಿದ್ದಾರೆ. ರಾಜೇಶ್ ಶೇಟ್ ಎನ್ನುವರು ಹೊನ್ನಾವರ ತಾಲೂಕಿನವರಾಗಿದ್ದು, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಬಸ್‍ಗಳ ಟಿಕೆಟ್ ದರವು ಸಾಮಾನ್ಯ ದಿನದಲ್ಲಿ 700 ರೂ.ದಿಂದ 800 ರೂಪಾಯಿ ಇರುತ್ತದೆ. ಆದರೆ ಹಬ್ಬ ಹರಿದಿನಗಳಲ್ಲಿ 1,500 ರೂ.ದಿಂದ 2,500 ರೂ.ಕ್ಕೂ ಅಧಿಕ ದರವಾಗುತ್ತದೆ. ಇದರಿಂದಾಗಿ ಅನೇಕ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದ್ದು, ಬೆಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಬರಬೇಕೆಂದರೆ ಒಬ್ಬರು ಕನಿಷ್ಠ 5,000 ರೂ. ತೆಗೆದಿಡಬೇಕು. ಕುಟುಂಬ ಸಮೇತ ಬರಬೇಕು ಎಂದರೆ ಬರುವ ವೇತನವನ್ನು ಟಿಕೆಟ್‍ಗೆ ಮೀಸಲಿಡಬೇಕು. ಇದೆಲ್ಲವನ್ನು ನೋಡಿ. ಬೇಸತ್ತ ಪ್ರಯಾಣಿಕ ರಾಜೇಶ್ ಅವರು, ಎಸ್‍ಎಸ್‍ಆರ್ ಎಸ್ ಟ್ರಾವೆಲ್ಸ್ ನಲ್ಲಿ 1,570 ರೂ. ಟಿಕೆಟ್ ಬುಕ್ ಮಾಡಿದ್ದಾರೆ. ಬಳಿಕ ಟಿಕೆಟ್ ಫೋಟೋ ಟ್ವೀಟ್ ಮಾಡಿ, ಮುಖ್ಯಮಂತ್ರಿಯವರಿಗೆ ಟ್ಯಾಗ್ ಮಾಡಿ, ದೀಪಾವಳಿಗೆ ಹೊನ್ನಾವರ ತಾಲೂಕಿನ ಗುಂಡಬಾಳಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.

ಅಷ್ಟೇ ಅಲ್ಲದೆ ಬುಕ್ ಮಾಡಲಾದ ಟಿಕೆಟ್-ನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಸಮಸ್ಯೆ ಕಡೆ ಗಮನ ನೀಡುವಂತೆ ರಾಜೇಶ್ ಮನವಿ ಮಾಡಿ. ಎಸ್‍ಆರ್ ಎಸ್ ಟ್ರಾವೆಲ್ಸ್ ನ 1,570 ರೂ. ಟಿಕೆಟ್ ಅನ್ನು ಮುಖ್ಯಮಂತ್ರಿ ಅವರ ಬೆಂಗಳೂರು ಕಚೇರಿಯ ವಿಳಾಸಕ್ಕೆ ಕಳುಹಿಸಿಕೊಟ್ಟಿದ್ದಾರೆ. ರಾಜೇಶ್ ಅವರ ಟ್ವೀಟ್ ಅನ್ನು ಅನೇಕ ನೆಟ್ಟಿಗರು ರಿಟ್ವೀಟ್ ಮಾಡಿ, ಹಬ್ಬ ಹಾಗೂ ರಜಾ ದಿನಗಳಲ್ಲಿ ಖಾಸಗಿ ಬಸ್‍ಗಳು ದರದ ಮೂರ್ನಾಲ್ಕು ಪಟ್ಟು ಹೆಚ್ಚು ವಸೂಲಿ ಮಾಡುತ್ತಿವೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಬಸ್ ದರಗಳ ಬಗ್ಗೆ ಮನವರಿಕೆ ಮಾಡುತ್ತಿರುವುದು ಇದೆ ಹೊಸದಲ್ಲ ಇವರು ಕಳೆದ ಎರಡು ವರ್ಷಗಳಿಂದ ಖಾಸಗಿ ಬಸ್‍ನವರು ರಜೆ ದಿನಗಳಲ್ಲಿ ಟಿಕೆಟ್‍ಗೆ ಅಧಿಕ ದರ ವಿಧಿಸುವ ಕುರಿತು ಕರ್ನಾಟಕದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ, ಸಾರಿಗೆ ಆಯುಕ್ತರಿಗೆ, ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ಲಿಖಿತ ದೂರು ನೀಡಿದ್ದಾರೆ. ಆದರೆ ಈವರೆಗೂ ಯಾವುದೇ ಶಾಶ್ವತ ಪರಿಹಾರ ಸಿಕ್ಕಿಲ್ಲ. ಇದರಿಂದಾಗಿ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಕುರಿತು ಅಧಿಕಾರಿಗಳು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎನ್ನುವುದು ಎಲ್ಲರ ಅಭಿಪ್ರಾಯ.