ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
119

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ 53 ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಆನ್‌ಲೈನ್ ಮೂಲಕ ಡಿಸೆಂಬರ್ 22,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 300 ಸಾಮಾನ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಉದ್ಯೋಗ ಮಾಹಿತಿ (Name Of The Posts): ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್

ಸಂಸ್ಥೆ (Organisation): ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ (ಪಿಜಿಸಿಐಎಲ್‌)

ವಿದ್ಯಾರ್ಹತೆ (Educational Qualification): ಬಿ.ಇ/ಬಿ.ಟೆಕ್/ಬಿ.ಎಸ್ಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವೇತನ (Salary Scale): ತಿಂಗಳಿಗೆ 23,000/- ರಿಂದ 30,000/-ರೂ ವೇತನ

ವಯೋಮಿತಿ: ಡಿಸೆಂಬರ್ 22,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 29 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನೇಮಕಾತಿ ನಿಯಮಾನುಸಾರ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಕ್ಷೇತ್ರ ಇಂಜಿನಿಯರ್ ಹುದ್ದೆಗಳಿಗೆ 400/-ರೂ, ಕ್ಷೇತ್ರ ಮೇಲ್ವಿಚಾರಕ ಹುದ್ದೆಗಳಿಗೆ 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವ ವಿಧಾನ: ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ (ಪಿಜಿಸಿಐಎಲ್‌)ದ ಕ್ಷೇತ್ರ ಮೇಲ್ವಿಚಾರಕ ಮತ್ತು ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.powergridindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಡಿಸೆಂಬರ್ 22,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ: https://www.powergridindia.com/ ಕ್ಲಿಕ್ ಮಾಡಿ.