ಡಿಪ್ಲೋಮಾದವರಿಗೆ ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಉದ್ಯೋಗ ಅವಕಾಶ

0
362

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ 35 ಡಿಪ್ಲೋಮಾ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಡಿಸೆಂಬರ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Also read: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಬ್ಯಾಂಕ್ ನಲ್ಲಿ ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: (Name Of The Posts): ಡಿಪ್ಲೋಮಾ ಟ್ರೈನಿ

ಸಂಸ್ಥೆ (Organisation): ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ (ಪಿಜಿಸಿಐಎಲ್‌)

ವಿದ್ಯಾರ್ಹತೆ (Educational Qualification): ಡಿಪ್ಲೋಮಾ

ವಯೋಮಿತಿ: ಡಿಸೆಂಬರ್ 16,2019ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ /ಓಬಿಸಿ ಅಭ್ಯರ್ಥಿಗಳು 300/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ/ ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌
https://www.powergridindia.com/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 16,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.