ಇನ್ಮುಂದೆ ರೈಲ್ವೆ ನಿಲ್ದಾಣಗಳಲ್ಲಿ ಸಿಗಲ್ಲ ಪ್ಲಾಸ್ಟಿಕ್ ನೀರಿನ ಬಾಟಲಿ; ಭಾರತೀಯ ರೈಲ್ವೆ ಅಕ್ಟೋಬರ್ 2ರಿಂದ ಪ್ಲಾಸ್ಟಿಕ್ ನಿಷೇಧ.!

0
218

ಇಡಿ ದೇಶಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆಗೆ ಈಗಾಗಲೇ ಅಂತ್ಯ ಹಾಡುವ ಪ್ರಕ್ರಿಯೆ ನಡೆಯುತ್ತಿದೆ. ಅದಕ್ಕಾಗಿ ಪ್ಲಾಸ್ಟಿಕ್ ತಯಾರಿಕ, ಮಾರಾಟವನ್ನು ನಿಷೇಧಿಸಿದೆ ಇದನ್ನು ಮಿರಿಯು ಪ್ಲಾಸ್ಟಿಕ್ ತಯಾರಿಸಿದರೆ ಭಾರಿ ದಂಡ ವಿಧಿಸಲು ದಂಡವನ್ನು ರಚಿಸಿದೆ. ಅದರಂತೆ ಪ್ಲಾಸ್ಟಿಕ್ ಬಳಸುವ ಹೋಟೆಲ್, ಮಾಲ್, ಅಂಗಡಿಗಳನ್ನೂ ಮುಟ್ಟುಗೋಲು ಹಾಕಲಾಗಿದ್ದು. ಒಂದು ಹಂತದಲ್ಲಿ ಬಳಕೆ ನಿಂತಿದೆ. ಆದರೆ ಸರ್ಕಾರದ ಅಧೀನದಲ್ಲಿರುವ ಕೆಲವು ಸ್ಥಳಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಂಡು ಬರುತ್ತಿತು ಅದರಲಿ ರೈಲ್ವೆ ಇಲಾಖೆಯೇ ಮುಂದೆ ಇದ್ದು ಬರುವ ಅ.2ರಿಂದ ರೈಲ್ವೆ ಇಲಾಖೆಯಿಂದ ಸಂಪೂರ್ಣ ಪ್ಲಾಸ್ಟಿಕ್ ಬಳಕೆಯನ್ನು ಬ್ಯಾನ್ ಮಾಡಲಿದೆ.


Also read: ಪ್ರತಿಯೊಂದು LPG ಗ್ರಾಹಕರು ಸಿಲಿಂಡರ್ ಅಪಘಾತದಲ್ಲಿ 6 ರಿಂದ 30 ಲಕ್ಷ, ಪರಿಹಾರ ಪಡೆದುಕೊಳ್ಳಬಹುದು ಹೇಗೆ ಅಂತ ಈ ಮಾಹಿತಿ ನೋಡಿ..

ರೈಲ್ವೆ ಸ್ಟೇಷನ್-ಗಳಲ್ಲಿ ಪ್ಲಾಸ್ಟಿಕ್ ಬ್ಯಾನ್?

ಹೌದು ರೈಲ್ವೆ ನಿಲ್ದಾಣಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳು ಹಾಗೂ ಇತರೆ ಪ್ಲಾಸ್ಟಿಕ್ ವಸ್ತುಗಳು ವ್ಯಾಪಕವಾಗಿ ಬಳಕೆಯಲ್ಲಿದ್ದು, ಇದನ್ನು ತಡೆಗಟ್ಟಲು ರೈಲ್ವೆ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ ಭಾರತೀಯ ರೈಲ್ವೆ ತನ್ನ ವ್ಯಾಪ್ತಿಯಲ್ಲಿ ಒಂದು ಬಾರಿ ಬಳಸುವ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲು ನಿರ್ಧರಿಸಿದ್ದು, ಈ ನಿಯಮ ಅಕ್ಟೋಬರ್ 2ರಿಂದ ಜಾರಿಗೆ ಬರಲಿದೆ. ಮೊದಲ ಹಂತದಲ್ಲಿ ದೇಶದ 360 ಪ್ರಮುಖ ರೈಲು ನಿಲ್ದಾಣಗಳಲ್ಲಿ ಈ ನಿಷೇಧ ಜಾರಿಗೆ ಬರಲಿದೆ. ಪ್ಲಾಸ್ಟಿಕ್ ನಿರ್ವಹಣೆ ಹಾಗೂ ಮರು ಬಳಕೆಗಾಗಿ ಈಗಾಗಲೇ ರೈಲ್ವೆ ಇಲಾಖೆ ಕ್ರಮ ಕೈಗೊಂಡಿದ್ದು, ಮೊದಲ ಹಂತದಲ್ಲಿ 360 ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಟ್ಟು 1,853 ಪ್ಲಾಸ್ಟಿಕ್ ವಾಟರ್ ಬಾಟಲ್‍ಗಳನ್ನು ಪುಡಿ(ಪ್ಲಾಸ್ಟಿಕ್ ವಾಟರ್ ಬಾಟಲ್ ಕ್ರಶಿಂಗ್ ಮಷಿನ್) ಮಾಡುವ ಯಂತ್ರಗಳನ್ನು ಅಳವಡಿಸಿದೆ. ಆದರೂ ಸಹ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡುವ ಕ್ರಮಕ್ಕೆ ಮುಂದಾಗಿದೆ.


Also read: ವಾಸ್ತು ಹೇಳುವ ಜ್ಯೋತಿಷಿಗಳನ್ನು, ಕರೆಸುವ ಮುನ್ನ ಎಚ್ಚರ; ಆಪ್ತಮಿತ್ರ ಸಿನಿಮಾ ಕತೆ ಕಥೆಕಟ್ಟಿ ಯುವತಿಯ ಹೆಸರಲ್ಲಿ 30 ಲಕ್ಷ ವಂಚನೆ ಮಾಡಿದ ಸ್ವಾಮೀಜಿ..

ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನೀಡಿದ ಸಲಹೆಯನ್ನು ಜಾರಿಗೆ ತರಲು ಮುಂದಾಗಿರುವ ಭಾರತೀಯ ರೇಲ್ವೆ, ಈಗ ಸುತ್ತೋಲೆ ಮೂಲಕ ಸೂಚನೆಯನ್ನು ಹೊರಡಿಸಿದ್ದು, ಅದನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎನ್ನಲಾಗಿದೆ.ಈ ನಿಯಮದಿಂದಾಗಿ ರೈಲ್ವೆ ಮಾರಾಟಗಾರರು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಸ್ಥಗಿತಗೊಳಿಸಬೇಕು, ಮರು ಬಳಕೆ ಮಾಡಬಹುದಾದ ಚೀಲಗಳನ್ನು ಬಳಸಬೇಕಾಗುತ್ತದೆ. ಇನ್ನೊಂದೆಡೆಗೆ ಈಗ ಐಆರ್‌ಸಿಟಿಸಿ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲಿಗಳನ್ನು ಹಿಂದಿರುಗಿಸುವ ಮತ್ತು ಪ್ಲಾಸ್ಟಿಕ್ ಬಾಟಲ್ ಪುಡಿಮಾಡುವ ಯಂತ್ರಗಳನ್ನು ತ್ವರಿತವಾಗಿ ಒದಗಿಸುವ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.


Also read: ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಿಗೆ ಆಧಾರ್‌ ಜೋಡಣೆ ಕಡ್ಡಾಯ? ಕೇಂದ್ರಕ್ಕೆ ಸುಪ್ರೀಂನಿಂದ ನೋಟಿಸ್ ಜಾರಿ.!

ಇದೀಗ ರೈಲ್ವೆ ಮಂಡಳಿ ಐಆರ್‍ಸಿಟಿಸಿ(ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆಂಡ್ ಟೂರಿಸಂ ಡೆವಲಪ್‍ಮೆಂಟ್ ಕಾರ್ಪೋರೇಷನ್)ಗೆ ತಿಳಿಸಿದ್ದು, ಬಳಸಿದ ನಂತರ ಬಾಟಲಿಗಳನ್ನು ಸಂಸ್ಥೆಯಿಂದಲೇ ಮರಳಿ ಪಡೆಯಬೇಕೆಂದು ಸೂಚಿಸಿದೆ. ಝೋನಲ್ ರೈಲ್ವೆ ಹಾಗೂ ಉತ್ಪಾದನಾ ಘಟಕಗಳು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಹಾಗೂ ಇತರೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತಪ್ಪಿಸಲು ಪ್ರೋತ್ಸಾಹಿಸುವಂತೆ ಸೂಚಿಸಲಾಗಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ಮರು ಬಳಕೆ ಮಾಡುವುದು ಹಾಗೂ ಪ್ಲಾಸ್ಟಿಕ್ ತಿರಸ್ಕರಿಸುವ ಮೂರು ಸೂತ್ರಗಳನ್ನು ರಚಿಸಲಾಗಿದೆ. ಅಲ್ಲದೆ, ಪ್ಲಾಸ್ಟಿಕ್ ಹೊರತುಪಡಿಸಿ ಮರು ಬಳಕೆ ಮಾಡಬಹುದಾದ ಕಡಿಮೆ ಬೆಲೆಯ ಚೀಲಗಳನ್ನು ಬಳಸುವಂತೆ ಜನರಿಗೆ ತಿಳುವಳಿಕೆ ನೀಡುವಂತೆ ಪ್ರಧಾನ ವ್ಯವಸ್ಥಾಪಕರು ರೈಲ್ವೆ ನೌಕರರಿಗೆ ಸೂಚನೆ ನೀಡಿದ್ದಾರೆ.