ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ

0
742

ರಾಜ್ಯ ಪೊಲೀಸ್‌ ಇಲಾಖೆ 1588 ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಪುರುಷರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ : ಆಗಸ್ಟ್‌ 30, 2017

ಸಹಾಯವಾಣಿ: 080-22943346

ಹೆಚ್ಚಿನ ಮಾಹಿತಿಗೆ ವೆಬ್‌: www.ksp.gov.in

ಅರ್ಹತೆಗಳೇನು?
ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ನಿಯಮಾನುಸಾರ ಪ್ರವರ್ಗ 2ಎ, 2ಬಿ, 3ಎ , 3ಬಿ , ಪರಿಶಿಷ್ಟ ಜಾತಿ/ಪಂಗಡ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಗರಿಷ್ಠ ವಯಸ್ಸು 27 ವರ್ಷ ಹಾಗೂ ಬುಡಕಟ್ಟ ಅಭ್ಯರ್ಥಿಗಳ ಗರಿಷ್ಠ ವಯಸ್ಸು 30 ವರ್ಷ ಎಂದು ನಿಗದಿಪಡಿಸಲಾಗಿದೆ.

ದೈಹಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ಎತ್ತರ 168 ಸೆಂ.ಮೀ. ಮತ್ತು ಎದೆ ಸುತ್ತಳತೆ 86 ಸೆಂ.ಮೀ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 250 ರೂಪಾಯಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಪ್ರವರ್ಗ-1 ಹಾಗೂ ಬುಡಕಟ್ಟು ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ.

ನೇಮಕ ಹೇಗೆ?:
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡ ನಂತರ ಸಹಿಷ್ಠುತೆ ಹಾಗೂ ದೇಹದಾಢ್ರ್ಯತೆ ಪರೀಕ್ಷೆಯನ್ನು ಸಂಬಂಧಪಟ್ಟ ಪೊಲೀಸ್‌ ಅಧೀಕ್ಷಕರ ಕಚೇರಿಯು ನಿಗದಿಪಡಿಸಿದ ಸ್ಥಳದಲ್ಲಿ ನಡೆಸುತ್ತದೆ. ಇದರಲ್ಲಿ ಉತ್ತೀರ್ಣರಾದವರು ಲಿಖಿತ ಪರೀಕ್ಷೆ ಬರೆಯಲು ಅರ್ಹತೆ ಪಡೆಯುತ್ತಾರೆ. ವಸ್ತುನಿಷ್ಠ ಮಾದರಿಯಲ್ಲಿ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟಿಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ದಾಖಲೆಗಳ ಪರಿಶೀಲನೆ ನಡೆಸಿದ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಗಮನದಲ್ಲಿ ಇಡಬೇಕಾದ ವಿಷಯ

  • ನೇಮಕಾತಿಗೆ ಸಂಬಂಧಿಸಿದ ಎಲ್ಲಾ ವಿವರಗಳು ವೆಬ್‌ಸೈಟ್‌ನಲ್ಲಿ ಲಭ್ಯ. ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  • ಅರ್ಜಿ ಸಲ್ಲಿಸುವಾಗ ಸಮಸ್ಯೆಗಳು ಕಂಡುಬಂದಲ್ಲಿ ಸಹಾಯವಾಣಿಗೆ ಕರೆ ಮಾಡಿ ತಿಳಿದುಕೊಳ್ಳಿ.
  • ಹುದ್ದೆ, ನೇಮಕಾತಿಗೆ ಸಂಬಂಧಿಸಿದ ಎಲ್ಲಾ ವಿವರಗಳು ವೆಬ್‌ಸೈಟ್‌ನಲ್ಲೇ ಸಿಗುತ್ತವೆ. ಅಂಚೆ ಮೂಲಕ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗುವುದಿಲ್ಲ.
  • ಒಬ್ಬರು ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶ. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದ್ದಲ್ಲಿ ಒಂದು ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ.