ರಸ್ತೆಗುಂಡಿಗಳಿಂದ ಆದ ಅಪಘಾತಗಳಿಗೆ ಪರಿಹಾರ ಕೊಡಲು ನಿರಾಕರಿಸಿದ ಬಿ.ಬಿ.ಎಂ.ಪಿ.ಗೆ ಹೈ ಕೋರ್ಟ್ ನಿಂದ ತರಾಟೆ!!

0
165

ರಸ್ತೆ ಗುಂಡಿ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಯಡವಟ್ಟು ಮಾಡುತ್ತಾನೆ ಬಂದಿದ್ದು, ರಸ್ತೆ ಗುಂಡಿಗಳಿಂದ ಉಂಟಾಗುವ ಅಪಘಾತಗಳಿಗೆ ಬಲಿಯಾದ ಸಂತ್ರಸ್ತರಿಗೆ ಪರಿಹಾರ ನೀಡುವ ಆದೇಶವನ್ನು ಪಾಲಿಸದ ಕಾರಣ ಕರ್ನಾಟಕ ಹೈಕೋರ್ಟ್ ಬ್ರೂಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯನ್ನು ತರಾಟೆಗೆ ತೆಗೆದುಕೊಂಡಿದ್ದು, ವಿವರಗಳನ್ನು ಒಳಗೊಂಡ ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್‌ ಬಿಬಿಎಂಪಿಗೆ ಆದೇಶಿಸಿ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ನೀಡಲು ವಿಫಲವಾದರೆ ನ್ಯಾಯಾಲಯದ ತಿರಸ್ಕಾರದ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

source: thenewsminute.com

Also read: ಇದೇ ವಾರದಲ್ಲಿ ನಾಲ್ಕು ದಿನ ಮೆಟ್ರೋ ಸಂಚಾರ ಸ್ಥಗಿತ; ಮೆಟ್ರೋ ಪ್ರಯಾಣಿಕರೆ ಇಗಲೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಿ.!

ಹೌದು ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಪರಿಹಾರ ನೀಡುವ ಕುರಿತಂತೆ ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದೂ ಸೇರಿದಂತೆ ಹೈಕೋರ್ಟ್‌ ನೀಡಿರುವ ಆದೇಶಗಳನ್ನು ಇನ್ನೂ ಪಾಲನೆ ಮಾಡದಿರುವ ಕುರಿತು ಸಮಗ್ರ ವಿವರಗಳನ್ನು ಒಳಗೊಂಡ ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್‌ ಬಿಬಿಎಂಪಿಗೆ ಆದೇಶಿಸಿದೆ. ಬೆಂಗಳೂರಿನ ರಸ್ತೆ ದುಸ್ಥಿತಿಯ ಬಗ್ಗೆ 2015ರಲ್ಲಿ ಕೋರಮಂಗಲದ ವಿಜಯನ್‌ ಮೆನನ್‌ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಮತ್ತು ನ್ಯಾ.ಎಸ್‌.ಆರ್‌. ಕೃಷ್ಣಕುಮಾರ್‌ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

Also read: ರೈಲ್ವೆ ನಿಲ್ದಾಣದಲ್ಲೇ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ.!

ಪಾಲಿಕೆ ಪರ ವಾದ ಆಲಿಸಿದ ಬಳಿಕ ನ್ಯಾಯಪೀಠ, ”ಈ ಹಿಂದೆ ನೀಡಿರುವ ಆದೇಶಗಳನ್ನು ಪಾಲನೆ ಮಾಡಿಲ್ಲ. ಇದನ್ನು ಲಘುವಾಗಿ ಪರಿಗಣಿಸುವುದಿಲ್ಲ. ಏಕೆ ಬಿಬಿಎಂಪಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬಾರದು” ಎಂದು ಎಚ್ಚರಿಕೆ ನೀಡಿತು. ನ. 25ರ ಕಡಲೆಕಾಯಿ ಪರಿಷೆಗೆ ಸಜ್ಜಾಗುತ್ತಿದೆ ಬೆಂಗಳೂರಿನ ಬಸವನಗುಡಿ: ಹೊಸ ಪೀಳಿಗೆಗೆ ಪರಿಷೆ ಪರಿಚಯಿಸಲು ವಿನೂತನ ಕಾರ್ಯಕ್ರಮಗಳು ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಬಿಬಿಎಂಪಿ ಪರ ವಕೀಲರು, ”ರಸ್ತೆಯಲ್ಲಿನ ಗುಂಡಿಗಳಿಂದಾಗಿ ಅಪಘಾತಕ್ಕೆ ಒಳಗಾಗಿ ಗಾಯಗೊಂಡವರಿಗೆ ಪರಿಹಾರ ನೀಡುವ ಬಗ್ಗೆ ಕರ್ನಾಟಕ ಪೌರಾಡಳಿತ ಕಾಯಿದೆಯಲ್ಲಿ ಯಾವುದೇ ಸ್ಪಷ್ಟ ವಿವರಣೆ ಇಲ್ಲ. ಆ ಬಗ್ಗೆ ಪಾಲಿಕೆ ಇನ್ನೂ ಮಾರ್ಗದರ್ಶಿ ಸೂತ್ರ ರೂಪಿಸಬೇಕಿದೆ.

Also read: ದೆವ್ವದ ವೇಷ ಧರಿಸಿ ಟಿಕ್ ಟಾಕ್ ಮಾಡಲು ಹೋದ ಇವರಿಗೆ ಯಾವ ಗತಿ ಬಂತು ನೋಡಿ!!

ಅದಕ್ಕಾಗಿ ತಜ್ಞರ ಅಭಿಪ್ರಾಯ ಕೋರಲಾಗಿದೆ” ಎಂದರು. ”ರಸ್ತೆ ಗುಂಡಿಗಳಿಂದಾಗಿ ಸಂಭವಿಸುವ ಅಪಘಾತದಲ್ಲಿಗಾಯಗೊಂಡವರಿಗೆ ಪರಿಹಾರ ನೀಡುವ ಕುರಿತು ಜಾಹೀರಾತು ಮೂಲಕ ಸಾರ್ವಜನಿಕರಿಗೆ ಪ್ರಚಾರ ನೀಡಬೇಕೆಂಬ ಹಿಂದಿನ ಆದೇಶ ಹಿಂಪಡೆಯಬೇಕು” ಎಂದೂ ಅವರು ಕೋರಿದರು. ಗುರುತಿಸಲಾದ 10,665 ಗುಂಡಿಗಳಲ್ಲಿ ಅಕ್ಟೋಬರ್ 1 ಮತ್ತು ನವೆಂಬರ್ 8 ರ ನಡುವೆ ಒಟ್ಟು 9,319 ಗುಂಡಿಗಳು ತುಂಬಿವೆ ಎಂದು ಬಿಬಿಎಂಪಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಗುಂಡಿಗಳನ್ನು ತುಂಬಲು ಭಾರಿ ಮಳೆಯು ಪ್ರಮುಖ ಅಡಚಣೆಯಾಗಿದೆ ಎಂದು ಬಿಬಿಎಂಪಿ ಹೇಳಿದೆ. ಎಂಜಿನಿಯರ್‌ಗಳು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಮತ್ತು ನವೆಂಬರ್ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿಯಲ್ಲಿ ತಿಳಿಸಿದೆ.