ಪವರ್ ಸಿಸ್ಟಮ್ ಆಪರೇಷನ್ ಕಾರ್ಪೋರೇಷನ್ ಲಿಮಿಟೆಡ್ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
236

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಪವರ್ ಸಿಸ್ಟಮ್ ಆಪರೇಷನ್ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಎಕ್ಸಿಕ್ಯುಟಿವ್ ಟ್ರೈನಿ (ಹೆಚ್‌ಆರ್), ಅಸಿಸ್ಟೆಂಟ್ ಆಫೀಸರ್ ಟ್ರೈನಿ (ಪಿಆರ್‌) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 20,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಪ್ರಸಾರ್ ಭಾರತಿ ಬೋರ್ಡ್ ನೇಮಕಾತಿ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಎಕ್ಸಿಕ್ಯುಟಿವ್ ಟ್ರೈನಿ (ಹೆಚ್‌ಆರ್), ಅಸಿಸ್ಟೆಂಟ್ ಆಫೀಸರ್ ಟ್ರೈನಿ (ಪಿಆರ್‌)

ಸಂಸ್ಥೆ (Organisation): ಪವರ್ ಸಿಸ್ಟಮ್ ಆಪರೇಷನ್ ಕಾರ್ಪೋರೇಷನ್ ಲಿಮಿಟೆಡ್

ವಿದ್ಯಾರ್ಹತೆ (Educational Qualification): ಎಕ್ಸಿಕ್ಯುಟಿವ್ ಟ್ರೈನಿ (ಹೆಚ್‌ಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ / ಸ್ನಾತಕೋತ್ತರ ಪದವಿ ಡಿಪ್ಲೋಮ / ಎಂಬಿಎ ಹೆಚ್‌ಆರ್‌/ ಪರ್ಸನಲ್ ಮ್ಯಾನೇಜ್ಮೆಂಟ್ / ಇಂಡಸ್ಟ್ರಿಯಲ್ ರಿಲೇಶನ್ಸ್ / ಸೋಶಿಯಲ್ ವರ್ಕ್ ಅನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಶೇ.60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ 31.7.2019ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 60,000/-ರಿಂದ 1,80,000/-ರೂ ಮತ್ತು ಅಸಿಸ್ಟೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/- ರಿಂದ 1,60,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಯುಜಿಸಿ ಎನ್‌ಇಟಿ ಜೂನ್ 2019ರ ಅಂಕಗಳ ಆಧಾರದ ಮೇಲೆ ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಪವರ್ ಇಂಡಸ್ಟ್ರಿಯ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಜೂನ್ 20,2019 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1AdW7N7sUCxp6jX18AFKUtYlvd_l33boo/view ಕ್ಲಿಕ್ ಮಾಡಿ.