ಪ್ರಸಾರ್‌ ಭಾರತಿ ನೇಮಕಾತಿ ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
96

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಪ್ರಸಾರ್‌ ಭಾರತಿ ನೇಮಕಾತಿ 60 ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೆಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮಾಡುವ ಮೂಲಕ ಆಗಸ್ಟ್ 6,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಮೈಸೂರು ಜಿಲ್ಲಾ ಕಂದಾಯ ಇಲಾಖೆಯಲ್ಲಿ 70 ಗ್ರಾಮಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಮಾರ್ಕೆಟಿಂಗ್ ಎಕ್ಸಿಕ್ಯುಟಿವ್

ಸಂಸ್ಥೆ (Organisation): ಪ್ರಸಾರ್‌ ಭಾರತಿ

ವಿದ್ಯಾರ್ಹತೆ (Educational Qualification) ಎಂಬಿಎ ಅಥವಾ ಸ್ನಾತಕೋತ್ತರ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವೇತನ (Salary Scale): ಮಾರ್ಕೆಟಿಂಗ್ ಎಕ್ಸಿಕ್ಯುಟಿವ್-ತಿಂಗಳಿಗೆ 30,000/-ರೂ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಗ್ರೇಡ್ -1- ತಿಂಗಳಿಗೆ 42,000/-ರೂ

ವಯೋಮಿತಿ: ಆಗಸ್ಟ್ 6,2019ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಪ್ರಸಾರ್ ಭಾರತಿಯ ಅಧಿಕೃತ ವೆಬ್‌ಸೈಟ್‌ http://prasarbharati.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 6,2019ರೊಳಗೆ ಕಳುಹಿಸಬಹುದು ಅಥವಾ ಮೇಲ್ ಮಾಡುವ ಮೂಲಕ ಕೂಡ ಆರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: http://prasarbharati.gov.in/ ಕ್ಲಿಕ್ ಮಾಡಿ.