ಪ್ರಸಾರ್ ಭಾರತಿ ಬೋರ್ಡ್ ನೇಮಕಾತಿ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
325

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಪ್ರಸಾರ್ ಭಾರತಿ ಬೋರ್ಡ್ ನೇಮಕಾತಿ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಬೆಬ್‌ಸೈಟ್‌ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 23,2019ರೊಳಗೆ ಕಳುಹಿಸಬೇಕು.

Also read: HAL ನಲ್ಲಿ ಮ್ಯಾನೇಜರ್, ಮೆಡಿಕಲ್ ಆಫೀಸರ್ & ಫಿನಾನ್ಸ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಸಿಸ್ಟೆಂಟ್ ಸೆಕ್ಷನ್ ಆಫೀಸರ್

ಸಂಸ್ಥೆ (Organisation): ಪ್ರಸಾರ್ ಭಾರತಿ ಬೋರ್ಡ್

ವಿದ್ಯಾರ್ಹತೆ (Educational Qualification): ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವ ವಿಧಾನ: ಹುದ್ದೆಗಳಿಗೆ ಕೇಳಲಾದ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪ್ರಸಾರ್ ಭಾರತಿಯ ಅಧಿಕೃತ ಬೆಬ್‌ಸೈಟ್‌ http://prasarbharati.gov.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 23,2019ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ: ಪ್ರಸಾರ್ ಭಾರತಿ, ಮಹಾತ್ಮ ಜ್ಯೋತಿ ರಾವ್ ಫುಲೆ ಮಾರ್ಗ್‌ ಏರಿಯಾ, ನವದೆಹಲಿ-110001