ಪ್ರವಾಸಿ ಭಾರತೀಯ ದಿವಸಕ್ಕೆ ಪ್ರಧಾನಿ ಮೋದಿ ಚಾಲನೆ

0
638

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಪ್ರವಾಸಿ ಭಾರತೀಯ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ, ಯಶಸ್ವಿಯಾಗಿ ಕಾರ್ಯಕ್ರಮ ಆಯೋಜಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸಿದರು.

ಮೂರು ದಿನಗಳ ಕಾಲ 14ನೇ ಪ್ರವಾಸಿ ಭಾರತೀಯ ದಿನ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿದ್ದು, ನಗರದ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. ಭಾರತೀಯ ಅನಿವಾಸಿ ಭಾರತೀಯರು ಹಾಗೂ ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಇನ್ನಿತರೆ ವಿಚಾರಗೋಷ್ಠಿಗಳು ಕಾರ್ಯದಲ್ಲಿ ನಡೆಯಲಿದ್ದು, ಸಂಜೆ ವೇಳೆಗೆ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿ ಅವರು ಸಚಿವರು, ಶಾಸಕರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ರಾಜಕೀಯ ಪಕ್ಷಗಳಿಗೆ ಬರುವ ದೇಣಿಗೆಯಲ್ಲಿ ಪಾರದರ್ಶಕತೆಗೂ ಅವರು ಕರೆ ನೀಡಿದ್ದಾರೆ. ”ನಾವು ನಮ್ಮ ರಾಜಕೀಯ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕವಾಗಿರುವಂತೆ ನೋಡಿಕೊಳ್ಳಬೇಕು,” ಎಂದು ಪ್ರಧಾನಿ ಹೇಳಿದ್ದಾಗಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮಾಹಿತಿ ನೀಡಿದ್ದಾರೆ.

21ನೇ ಶತಮಾನ ಭಾರತೀಯರದ್ದು:

21 ನೇ ಶತಮಾನ ಎನ್ನುವುದು ಭಾರತೀಯರದ್ದು ಎಂದು ನಾನು ಸಂಪೂರ್ಣ ಆತ್ಮವಿಶ್ವಾಸದಿಂದ ಹೇಳುತ್ತಿದ್ದೇನೆ. ಭಾರತದ ಅಭಿವೃದ್ಧಿಯಲ್ಲಿ ಅನಿವಾಸಿ ಭಾರತೀಯ ಸಮುದಾಯದ ಕೊಡುಗೆ ಅಪಾರವಾಗಿದೆ. ನೀವೆಲ್ಲ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧದ ಹೋರಾಟವಾಗಿ ಸರಕಾರ ಕೈಗೊಂಡ ನೋಟು ನಿಷೇಧ ಕ್ರಮವನ್ನು ಬೆಂಬಲಿಸಿದ್ದೀರಿ ಇದಕ್ಕಾಗಿ ನನ್ನ ಧನ್ಯವಾದಗಳು ಎಂದರು.

ಬ್ರೇನ್ ಡ್ರೇನ್’ ಅನ್ನು ‘ಬ್ರೇನ್ ಗೇನ್’ ಆಗಿ ಪರಿವರ್ತಿಸುವುದು ಸರ್ಕಾರದ ಉದ್ದೇಶ:

 ಭಾರತವನ್ನು ವಿಶ್ವ ಗುರುವನ್ನಾಗಿಸಲು ಯುವಜನತೆಯ ಸಹಕಾರ ಅಗತ್ಯ, ವಿಶ್ವದ ಎಲ್ಲಾ ದೇಶಗಳಲ್ಲೂ ಭಾರತೀಯರ ಹೆಜ್ಜೆಗುರುತುಗಳಿವೆ.

ವಿಶ್ವದ ಎಲ್ಲಾ ದೇಶಗಳಲ್ಲಿಯೂ ಭಾರತೀಯ ಹೆಜ್ಜೆ ಗುರುತುಗಳಿವೆ. ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಶಿಕ್ಷಣ ಪತ್ರಿಕೋದ್ಯಮ ಬ್ಯಾಂಕಿಂಗ್, ಆರ್ಥಿಕತೆ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತೀಯ ಸಾಧನೆ ದೊಡ್ಡದಾಗಿದ್ದು, ಬ್ರೇನ್ ಡ್ರೇನ್ ಅನ್ನು ಬ್ರೇನ್ ಗೇನ್ ಆಗಿ ಪರಿವರ್ತಿಸುವುದು ಸರ್ಕಾರದ ಉದ್ದೇಶವಾಗಿದ್ದು, ಇದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದ್ದಾರೆ.