ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ‘ಸುಪ್ರೀಂಕೋರ್ಟ್​’ ಮರುಪರಿಶೀಲನಾ ಅರ್ಜಿ ತಿರಸ್ಕಾರ ಮೋದಿ ಸರ್ಕಾರಕ್ಕೆ ನಿರಾಳ.!

0
189

ರಫೇಲ್ ಡೀಲ್ ನಲ್ಲಿ ಭ್ರಷ್ಟಾಚಾರ ನಡೆದಿದೆ ಚೌಕಿದಾರ್ ಚೋರ್ ಹೈ ಎಂದು ಹೇಳುತ್ತಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಇಂದು ಚಿ ಮಾರಿ ಹಾಕಿದೆ. ರಾಹುಲ್ ಗಾಂಧಿಗೆ ಮಾತಿನ ಮೇಲೆ ಹಿಡಿತವಿರಲಿ ಎಂದು ಹೇಳಿದ್ದು, ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಗ್​ ರಿಲೀಫ್​ ನೀಡಿದೆ. “ಈ ಪ್ರಕರಣದಲ್ಲಿ ತನಿಖೆ ನಡೆಸಲು ಆದೇಶ ಹೊರಡಿಸುವ ಪೂರಕ ಅಂಶಗಳಿಲ್ಲ. ರಾಜಕೀಯ ಲಾಭಕ್ಕಾಗಿ ಕೋರ್ಟ್ ಆದೇಶವನ್ನು ಎಳೆದು ತರಬಾರದು ಎಂದು ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ. ಎಸ್‍ಕೆ ಕೌಲ್, ನ್ಯಾ. ಕೆ.ಎಂ ಜೋಸೆಫ್ ಅವರಿದ್ದ ಪೀಠ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದೆ.

Also read: ಶಬರಿಮಲೆ ಮಹಿಳೆಯರ ಪ್ರವೇಶ ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದ ಸುಪ್ರೀಂಕೋರ್ಟ್; ಹಿಂದೂಗಳಿಗೆ ಸೀಮಿತವಲ್ಲ ಎಲ್ಲ ಧರ್ಮಗಳಿಗೂ ಅನ್ವಯ.!

ಹೌದು ರಫೇಲ್ ಪ್ರಕರಣದಲ್ಲಿ ಸರ್ಕಾರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕಕರಿಸಿದೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಗ್​ ರಿಲೀಫ್​ ನೀಡಿದೆ. “ಈ ಪ್ರಕರಣದಲ್ಲಿ ತನಿಖೆ ನಡೆಸಲು ಆದೇಶ ಹೊರಡಿಸುವ ಪೂರಕ ಅಂಶಗಳಿಲ್ಲ. ಹೀಗಾಗಿ ಕೋರ್ಟ್​ ಅರ್ಜಿಯನ್ನು ವಜಾ ಮಾಡುತ್ತಿದೇವೆ,” ಎಂದು ಸುಪ್ರೀಂಕೋರ್ಟ್​ ಹೇಳಿತು ಈ ಆದೇಶ ಬಂದ ನಂತರ ಚೌಕಿದಾರ್(ಪ್ರಧಾನಿ ಮೋದಿ) ಚೋರ್ ಹೈ ಎಂಬುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಪ್ರಚಾರ ಭಾಷಣದಲ್ಲಿ ಹೇಳಿದ್ದರು.

ರಾಹುಲ್ ಗಾಂಧಿ ಅವರು, ರಫೇಲ್ ಡೀಲ್ ಪ್ರಕರಣದ ಆದೇಶದಲ್ಲಿ ಇಲ್ಲದೆ ಇರುವ ಅಂಶಗಳನ್ನು ಉಲ್ಲೇಖಿಸಿ ಮೋದಿ ಅವರನ್ನು ಟೀಕೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಸುಪ್ರೀಂ ಕೋರ್ಟಿನಲ್ಲಿ ರಾಹುಲ್ ವಿರುದ್ಧ ನ್ಯಾಯಾಂಗ ನಿಂದನೆ ದೂರು ನೀಡಿದ್ದರು. ಮೀನಾಕ್ಷಿ ಲೇಖಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ನೀಡಬೇಕೆಂದು ಸೂಚಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯೂ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು ನೀಡಿತ್ತು.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಕರಣ ರಾಜಕೀಯವಾಗಿ ತೀವ್ರತೆ ಪಡೆಯುತ್ತಿದ್ದಂತೆ ಅಫಿಡವಿಟ್ ಸಲ್ಲಿಸಿದ್ದ ರಾಹುಲ್ ಗಾಂಧಿ, ಚೌಕಿದಾರ್ ಚೋರ್ ಹೈ ಎಂದು ಸುಪ್ರೀಂ ಹೇಳಿದೆ ಎನ್ನಲಾದ ಹೇಳಿಕೆ ಉದ್ದೇಶಪೂರ್ವಕವಲ್ಲದ ಅಜಾಗರೂಕತೆಯಿಂದ ಕೂಡಿದ ಹೇಳಿಕೆಯಾಗಿದೆ. ಈ ಹೇಳಿಕೆ ನೀಡಿದ್ದಕ್ಕೆ ನಾನು ಸುಪ್ರೀಂ ಕೋರ್ಟ್ ನಲ್ಲಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದರು. ಕಳೆದ ಏಪ್ರಿಲ್ 30ರಂದು ನಡೆದಿದ್ದ ವಿಚಾರಣೆಯಲ್ಲಿ ‘ಚೌಕಿದಾರ್ ಚೋರ್’ ಹೇಳಿಕೆ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ಕ್ಷಮೆ ಕೋರಿದ್ದರು. ಆದರೆ ತಮ್ಮ ಹೇಳಿಕೆ ಕುರಿತು ನೇರವಾಗಿ ತಪ್ಪೊಪ್ಪಿಕೊಳ್ಳದ ರಾಹುಲ್‌ ಗಾಂಧಿ ಅವರ ನಡೆ ಬಗ್ಗೆ ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಈ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದೆ. ರಾಹುಲ್ ಗಾಂಧಿ ಹೇಳಿಕೆ ದುರಾದುಷ್ಟಕರ. ಇನ್ನು ಮುಂದಾದರೂ ಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿ ಎಂದು ಹೇಳಿದೆ. ಜೊತೆಗೆ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟಿದೆ.

Also read: ಬಿಗ್ ಬ್ರೇಕಿಂಗ್: ಅನರ್ಹ ಶಾಸಕರಿಗೆ ಬಿಗ್ ರಿಲೀಫ್, ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ಸುಪ್ರಿಂಕೋರ್ಟ್ ಹೇಳಿದ್ದೇನು??