ಗ್ರಾಮ ಪಂಚಾಯಿತಿ ಗ್ರೇಡ್ 2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
820

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಯಚೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರೇಡ್ 2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 27,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 477 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರೇಡ್ 2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ

ಸಂಸ್ಥೆ (Organisation): ಜಿಲ್ಲಾ ಪಂಚಾಯಿತಿ

ವಿದ್ಯಾರ್ಹತೆ (Educational Qualification): ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಹತೆಯುಳ್ಳ ಆಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ರಾಯಚೂರು (ಕರ್ನಾಟಕ)

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ರಾಯಚೂರು ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್‌ಸೈಟ್‌ http://zpraichur.kar.nic.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಸೆಪ್ಟೆಂಬರ್ 27,2019ರ ರೊಳಗೆ ಪೋಸ್ಟ್
ಮೂಲಕ ಸಲ್ಲಿಸಬಹುದು. ಕಚೇರಿಯ ವಿಳಾಸ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ ರಾಯಚೂರು.