ಪಿಯುಸಿ ಅಥವಾ ಪದವಿ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ; ವಿವಿಧ 35,277 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
648

ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರೈಲ್ವೆ ನೇಮಕಾತಿ ಬೋರ್ಡ್ 35,277 ಸ್ಟೇಷನ್ ಮಾಸ್ಟರ್, ಟಿಕೆಟ್ ಕ್ಲರ್ಕ್ ಮತ್ತು ಜ್ಯೂನಿಯರ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅಧಿಕೃತ ವೆಬ್‌ಸೈಟ್ ನಲ್ಲಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಮಾರ್ಚ್ 31,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ಕಾರಾಗೃಹ ಇಲಾಖೆ 662 ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸ್ಟೇಷನ್ ಮಾಸ್ಟರ್, ಟಿಕೆಟ್ ಕ್ಲರ್ಕ್ ಮತ್ತು ಜ್ಯೂನಿಯರ್ ಕ್ಲರ್ಕ್

ಸಂಸ್ಥೆ (Organisation): ರೈಲ್ವೆ ನೇಮಕಾತಿ ಬೋರ್ಡ್

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಿದ್ಯಾರ್ಹತೆ (Educational Qualification): ಪಿಯುಸಿ ,ಪದವಿ

ವಯೋಮಿತಿ: ಖಾಲಿ ಇರುವ ವಿವಿಧ ಹುದ್ದೆಗಳಿಗೆ ಜುಲೈ 2,2019ರ ಅನ್ವಯ 18 ರಿಂದ 33 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಅಂಗವಿಕಲ
ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವನ್ನು ಏಪ್ರಿಲ್ 5,2019 ರೊಳಗೆ ಪಾವತಿಸಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸಲು http://www.rrbkolkata.gov.in/ ಹೋಗಿ ಅರ್ಜಿ ಸಲ್ಲಿಸಿ.

ಹೆಚ್ಚಿನ ಮಾಹಿತಿಗಾಗಿ: http://www.rrbcdg.gov.in/uploads/cen_01_2019_eng.pdf ಕ್ಲಿಕ್ ಮಾಡಿ.