10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿನ ಹಲವು ಹುದ್ದೆಗಳಿಗೆ ನೇಮಕಾತಿ.!

0
255

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ಕೋಸ್ಟ್ ಗಾರ್ಡ್ ನಾವಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಸಹಾಯಕ ಲೊಕೊ ಪೈಲಟ್ ಮತ್ತು ಟೆಕ್ನಿಷಿಯನ್.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.

ಹುದ್ದೆಗಳ ವಿಂಗಡಣೆ: ಒಟ್ಟು ಹುದ್ದೆಗಳ ಸಂಖ್ಯೆ – 306, ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು, ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019

ಹೆಚ್ಚಿನ ಮಾಹಿತಿಗಾಗಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ: Www.rrc-wr.com ಕ್ಲಿಕ್ ಮಾಡಿ.