ರೈಲ್ವೆಗಳಲ್ಲಿ ಪ್ರಯಾಣಿಸುವರಿಗೆ ಬಂಪರ್‌ ಆಫರ್; ಈ ರೈಲುಗಳ ಟಿಕೆಟ್ ದರದಲ್ಲಿ ಶೇ. 25 ರಷ್ಟು ರಿಯಾಯಿತಿ ಘೋಷಣೆ..

0
172

ಪ್ರಯಾಣಿಕರನ್ನು ಸೆಳೆಯುವ ಸಲುವಾಗಿ ರೈಲ್ವೆ ಇಲಾಖೆ ಹಲವು ನಿಯಮಗಳನ್ನು ಜಾರಿ ಮಾಡುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್ ಆಗಿದೆ. ಏಕೆಂದರೆ ಪ್ರಯಾಣದಲ್ಲಿ ದರದಲ್ಲಿ ಶೇ. 25 ರಷ್ಟು ರಿಯಾಯಿತಿ ಆಫರ್ ನೀಡಿದೆ. ಪ್ರಯಾಣಿಕರ ಕೊರತೆ ಎದುರಿಸುತ್ತಿರುವ ರೈಲ್ವೆ ಇಲಾಖೆ ಈ ಕ್ರಮವನ್ನು ಘೋಷಣೆ ಮಾಡಿದ್ದು, ಹಬ್ಬಕ್ಕೆ ಊರಿಗೆ ತೆರಳುವರಿಗೆ ಇದರ ಲಾಭ ಪಡೆಯುವಂತೆ ಆಗಿದೆ. ಇದರಿಂದ ರೈಲ್ವೆ ಸಂಸ್ಥೆ ಎದುರಿಸುತ್ತಿರುವ ಸಮಸ್ಯೆಯನ್ನು ಸರಿದುಗಿಸಲು ಸರಿಯಾದ ಮಾರ್ಗವಾಗಿದೆ ಎಂದು ಇಲಾಖೆ ತಿಳಿಸಿದೆ.

ಯಾವ ರೈಲುಗಳಿಗೆ ಈ ಆಫರ್?

ಹೌದು ಕಡಿಮೆ ದರದ ವಿಮಾನಯಾನ ಹಾಗೂ ಇತರೆ ರಸ್ತೆ ಮಾರ್ಗದ ಇತರ ವಲಯಗಳಿಂದ ಎದುರಾದ ತೀವ್ರ ಪೈಪೋಟಿಯಿಂದ ಶತಾಬ್ದಿ, ತೇಜಸ್‌ ಹಾಗೂ ಗತಿಮಾನ್‌ ಎಕ್ಸ್‌ಪ್ರೆಸ್‌ ರೈಲುಗಳ ಪ್ರಯಾಣಿಕರ ಸಂಖ್ಯೆ ವಿರಳಗೊಂಡಿದ್ದು, ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದು. ಭಾರತೀಯ ರೈಲ್ವೆ ಪ್ರಕಾರ, ಎಲ್ಲಾ ರೈಲುಗಳ ಎಸಿ ಕ್ಲಾಸ್ ಮತ್ತು ಎಸಿ ಚೇರ್ ಕಾರ್ ಪ್ರಯಾಣಿಕರಿಗೆ ಅನ್ವಯವಾಗಲಿದೆ. ಶತಾಬ್ದಿ ಎಕ್ಸ್‌ಪ್ರೆಸ್, ಗತಿಮಾನ್ ಎಕ್ಸ್‌ಪ್ರೆಸ್, ತೇಜಸ್ ಎಕ್ಸ್‌ಪ್ರೆಸ್, ಡಬಲ್ ಡೆಕ್ಕರ್ ಮತ್ತು ಇಂಟರ್ಸಿಟಿ ಎಕ್ಸ್‌ಪ್ರೆಸ್‌ ಒಳಗೊಂಡಂತೆ ಇನ್ನಿತರೆ ರೈಲುಗಳ ಸೀಟುಗಳ ದರದಲ್ಲಿ ಶೇ. 25 ವರೆಗೆ ರಿಯಾಯಿತಿ ಸೌಲಭ್ಯ ಸಿಗಲಿದೆ.

ಖಾಲಿ ಇರುವ ಆಸನಗಳನ್ನು ಭರ್ತಿ ಮಾಡಲು ಮತ್ತು ಕಡಿಮೆ ದರದ ರಸ್ತೆ ಸಾರಿಗೆ ಹಾಗೂ ವಿಮಾನ ಪ್ರಯಾಣ ಸೇವೆಗಳ ಜೊತೆ ಸ್ಪರ್ಧಿಸುವ ನಿಟ್ಟಿನಲ್ಲಿ ಭಾರತೀಯ ರೇಲ್ವೆ ಈ ಯೋಜನೆಯನ್ನು ಪ್ರಕಟಿಸಿದೆ. ರೇಲ್ವೆ ಇಲಾಖೆ ಮೂಲ ದರದ ಮೇಲೆ ಶೇ. 25 ರವರೆಗೆ ರಿಯಾಯತಿ ನೀಡಲಿದೆ. ಎಸಿ ಚೇರ್‌, ಎಕ್ಸ್‌ಕ್ಯೂಟಿವ್‌ ಚೇರ್‌ ಸೀಟುಗಳ ಮೂಲ ದರದಲ್ಲಿ ರಿಯಾಯಿತಿ ನೀಡಲಾಗಿದ್ದು, ಜಿಎಸ್‌ಟಿ, ಟಿಕೆಟ್‌ ಕಾಯ್ದಿರಿಸುವಿಕೆಯ ಶುಲ್ಕ, ಸೂಪರ್‌ಫಾಸ್ಟ್‌ ಟ್ಯಾರಿಫ್‌ ಸೇರಿದಂತೆ ಇನ್ನಿತರ ಶುಲ್ಕಗಳನ್ನು ಪ್ರಯಾಣಿಕರು ಭರಿಸಬೇಕು ಎಂದು ರೈಲ್ವೆ ಇಲಾಖೆ ಹೇಳಿದೆ. ಯಾವ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ ಹಾಗೂ ಯಾವ ಮಾರ್ಗದ ರೈಲುಗಳ ಶುಲ್ಕದಲ್ಲಿ ರಿಯಾಯತಿ ನೀಡಬೇಕು ಎಂಬಂಥ ಅಧಿಕಾರವನ್ನು ಪ್ರಧಾನ ವಾಣಿಜ್ಯ ವ್ಯವಸ್ಥಾಪಕರಿಗೆ ನೀಡಲಾಗಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

ಹೆಚ್ಚುವರಿ ರೈಲು ಸೇವೆ

ಈ ರಿಯಾಯತಿ ಆಫರ್‌ ಅನ್ನು ವಾರ್ಷಿಕ, 6 ತಿಂಗಳು ಅಥವಾ ವಾರಾಂತ್ಯದಲ್ಲಿ ನೀಡಬಹುದಾಗಿದೆ. ಅಲ್ಲದೆ, ಸೆ.30ರ ಒಳಗಾಗಿ ಕಡಿಮೆ ಪ್ರಯಾಣಿಕರನ್ನು ಹೊಂದಿದ ರೈಲುಗಳ ಮಾರ್ಗಗಳನ್ನು ಗುರುತಿಸುವಂತೆ ಎಲ್ಲಾ ರೈಲ್ವೆ ವಲಯಗಳಿಗೆ ರೈಲ್ವೆ ಇಲಾಖೆ ಸೂಚನೆ ನೀಡಿದೆ. ಜೊತೆಗೆ, ಪ್ರಯಾಣಿಕರಿಗೆ ರಿಯಾಯತಿ ದರದ ಟಿಕೆಟ್‌ ಯೋಜನೆ ಜಾರಿಯಾದ ಆಗುವ ಬದಲಾವಣೆ ಕುರಿತು 4 ತಿಂಗಳ ಬಳಿಕ ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಕಳೆದ ಸಾಲಿನ ಮಾಸಿಕ ಶೇ. 50 ಕ್ಕಿಂತ ಕಡಿಮೆ ಪ್ರಯಾಣಿಕರು ಪಯಣಿಸಿದ್ದ ರೈಲುಗಳಿಗೆ ಈ ರಿಯಾಯತಿ ಸೌಲಭ್ಯ ಅನ್ವಯವಾಗಲಿದೆ ಎಂದು ಭಾರತೀಯ ರೈಲ್ವೇ ಇಲಾಖೆ ತಿಳಿಸಿದೆ. ಶತಾಬ್ದಿ ರೈಲು ಪ್ರಯಾಣ ದರದ ಮೇಲೆ ಶೇ. 10 ರಷ್ಟು ರಿಯಾಯತಿ ಇದ್ದರೂ, ತತ್ಕಾಲ್ ಕೋಟಾದಡಿ ಬುಕ್ ಮಾಡುವ ಟಿಕೆಟ್ ಗಳಿಗೆ ಈ ರಿಯಾಯತಿ ದರ ಅನ್ವಯವಾಗುವುದಿಲ್ಲ.