ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..!

0
213

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ http://www.rcub.ac.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ನೋಡಿಕೊಂಡು, ಡಿಸೆಂಬರ್ 10,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ AAI ಕಾರ್ಗೊದಲ್ಲಿ 283 ಮಲ್ಟಿಟಾಸ್ಕರ್ ಹುದ್ದೆಗಳ ನೇಮಕಾತಿ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸಾಫ್ಟ್‌ವೇರ್ ಡೆವಲಪರ್

ಸಂಸ್ಥೆ (Organisation): ರಾಣಿ ಚನ್ನಮ್ಮ ವಿಶ್ವವಿದ್ಯಾಲಯ

ವಿದ್ಯಾರ್ಹತೆ (Educational Qualification): ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೇಮಕಾತಿಯ ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್‌ ವಿಭಾಗದಲ್ಲಿ ಇಂಜಿನಿಯರಿಂಗ್‌ ಪದವಿ/ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಬೆಳಗಾವಿ (ಕರ್ನಾಟಕ)

ವಯೋಮಿತಿ: ಈ ಹುದ್ದೆಗಳಿಗೆ ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ placenentcell@rcub.ac.in ವಿಳಾಸಕ್ಕೆ ಡಿಸೆಂಬರ್ 10,2019ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 13,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.