ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಗ್ರೇಡ್ -ಬಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
793

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 199 ಗ್ರೇಡ್ -ಬಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಅಕ್ಟೋಬರ್ 10. 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ಜೀವ ವಿಮಾ ನಿಗಮ 8,000ಕ್ಕೂ ಹೆಚ್ಚು ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಗ್ರೇಡ್ -ಬಿ ಅಧಿಕಾರಿ

ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆ ಮತ್ತು ಸ್ನಾತಕೋತ್ತರ ಪದವಿಯನ್ನು ಶೇ.55%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಹಾಗೂ ಶೇ.50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ : ಜುಲೈ 1,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ವಿವರ: ಗ್ರೇಡ್-ಬಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,150/ – ರಿಂದ 62,400 /-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 850/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21.9.2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11.10.2019
ಆನ್‌ಲೈನ್ ಪರೀಕ್ಷೆ (ಪೇಪರ್ -1)ಯ ದಿನಾಂಕ : 9.11.2019
ಆನ್‌ಲೈನ್ ಪರೀಕ್ಷೆ (ಪೇಪರ್-11)ಯ ದಿನಾಂಕ : 1 ಮತ್ತು 2,ಡಿಸೆಂಬರ್ 2019.

ಹೆಚ್ಚಿನ ಮಾಹಿತಿಗಾಗಿ: https://www.rbi.org.in/ ಕ್ಲಿಕ್ ಮಾಡಿ.