ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಕಾರ್ಮಿಕ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
359

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್ ಕಾರ್ಮಿಕ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜೂನ್ 17,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಡಿಫೆನ್ಸ್ ರಿಸರ್ಚ್ ಮತ್ತು ಡೆವಲಪ್ಮೆಂಟ್ (DRDO) 351 ಟೆಕ್ನೀಶಿಯನ್ ‘ಎ’ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕಾರ್ಮಿಕ ಕಲ್ಯಾಣ ಅಧಿಕಾರಿ

ಉದ್ಯೋಗ ಸ್ಥಳ (Job Location): ಮೈಸೂರು (ಕರ್ನಾಟಕ)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ: ಜೂನ್ 1,2019 ರ ಅನ್ವಯ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.brbnmpl.co.in/english/ ನಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 17,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ: ದಿ ಜನರಲ್ ಮ್ಯಾನೇಜರ್ ಇನ್‌ಚಾರ್ಜ್, ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈ.ಲಿ. ಕಾರ್ಪೋರೇಟ್ ಆಫೀಸ್, ನಂ.3 ಮತ್ತು 4, ಮೊದಲನೇ ಸ್ಟೇಜ್, ಮೊದಲನೇ ಫೇಸ್, ಬಿಟಿಎಂ ಲೇಔಟ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು-560029.

ಹೆಚ್ಚಿನ ಮಾಹಿತಿಗಾಗಿ: https://www.brbnmpl.co.in/LinkClick.aspx?fileticket=6S-DeAgHNSs%3d&portalid=0 ಕ್ಲಿಕ್ ಮಾಡಿ.