ಮನೆಯ ಮುಂದೆ ಸಗಣಿಯಿಂದ ಸಾರಿಸುವುದರ ಹಿಂದಿನ ವೈಜ್ಞಾನಿಕ ವಿಚಾರ!!

0
4240

ಭಾರತೀಯ ಸಂಸ್ಕೃತಿಯಲ್ಲಿ ಆಕಳಿಗೆ ತುಂಬಾ ಮಹತ್ವವಿದೆ. ಅನಾದಿ ಕಾಲದಿಂದಲೂ ಮಾನವನಿಗೂ ಗೋವಿಗೂ ಅವಿನಾಭಾವ ಸಂಬಂಧ ಇದೆ. ತನ್ನ ಹಾಲಿನಿಂದ ಸಮಾಜವನ್ನು ಬಲಿಷ್ಠಗೊಳಿಸುವ, ಕೃಷಿಗಾಗಿ ತನ್ನ ಸೆಗಣಿಯಿಂದ ಗೊಬ್ಬರವನ್ನು ನೀಡುವ, ಕೃಷಿಗೆ ಉಪಯುಕ್ತವಾದ ಎತ್ತುಗಳಿಗೆ ಜನ್ಮ ನೀಡುವ ಗೋಮಾತೆಯನ್ನು ನಾವು ಪೂಜೆ ಮಾಡುತ್ತಿದ್ದೇವೆ. ಹಸುವನ್ನು ದೇವರೆಂದು ಪೂಜಿಸೋ ಭಾರತೀಯರಾದ ನಮ್ಮಲ್ಲಿ ಎಷ್ಟೋ ಜನಕ್ಕೆ ಇದರ ಮಾಹಿತಿ ಇಲ್ಲ.

ಗೋಮಯ, ಗೋಮೂತ್ರ, ಹಾಲು, ಮೊಸರು ಮತ್ತು ತುಪ್ಪ ಇವುಗಳನ್ನು ಪಂಚಗವ್ಯಗಳೆನ್ನುತ್ತೇವೆ. ಇವೆಲ್ಲವೂ ಆಕಳದ್ದಾಗಿರುತ್ತದೆ. ಇವುಗಳಲ್ಲಿ ಪ್ರತಿಯೊಂದಕ್ಕೂ ಅದರದೆ ಆದ ವಿಷೇಶ ಗುಣಗಳಿರುತ್ತವೆ. ವಿಷೇಶವಾಗಿ ಗೋಮಯದಲ್ಲಿ ಸೂಕ್ಷ್ಮವಾದ ಬ್ಯಾಕ್ತೀರಿಯಾಗಳನ್ನು ತಡೆಯುವ ಶಕ್ತಿ ಹೆಚ್ಚಾಗಿರುತ್ತದೆ. ಗೋಮಯದಿಂದ ಮನೆಯ ಮುಂದೆ ಸಾರಿಸಿದರೆ ಹೊರಗಿನ ವಾತಾವರಣದಲ್ಲಿನ ರೋಗಕಾರಕ ಬ್ಯಾಕ್ತೇರಿಯಾಗಳು ಮನೆಯೊಳಗೆ ಬರದಂತೆ ತಡೆಯುತ್ತದೆ. ಇದರಿಂದ ಅನೇಕ ರೋಗಗಳನ್ನು ಹತ್ತಿರ ಸುಳಿಯದಂತೆ ಮಾಡಬಹುದಾಗಿದೆ. ಹಾಗೆಯೇ ರಂಗವಲ್ಲಿ ಹಾಕುವುದು ನಮ್ಮ ಧರ್ಮದ ವಿಶೇಷ ಸಂಪ್ರದಾಯವಾಗಿದೆ. ಚಿತ್ತಾಕರ್ಶಕ ಬಗೆಬಗೆಯ ರಂಗೋಲಿಗಳನ್ನು ಸುಣ್ಣದ ಉಂಡೆ ಮತ್ತು ಕೆಂಪು ಮಣ್ಣಿನಿಂದ ಹಾಕುತ್ತಾರೆ. ಸುಣ್ಣದ ಉಂಡೆಮತ್ತು ಕೆಂಪುಮಣ್ಣುಗಳೂ ಸಹ ಆಂಟಿ ಬಯೋಟಿಕ್ ಗಳೆಂಬುದನ್ನು ಮರೆಯಬಾರದು. ಈಗೀಗ ನಗರ ಪ್ರದೇಶಗಳಲ್ಲಿ ಸಮಯಾಭಾವ ಮತ್ತು ಸ್ಥಳಾಭಾವದಿಂದ ಮನೆಯಮುಂದೆ ಸಾರಿಸುವುದು ಮತ್ತು ರಂಗವಲ್ಲಿ ಹಾಕುವುದು ದೂರವೇ ಉಳಿದಿದೆ. ಅಲ್ಲಲ್ಲಿ ನಡೆಯುವ ರಂಗವಲ್ಲಿ ಸ್ಪರ್ದೆಗಳಲ್ಲಿ ಮಾತ್ರ ರಂಗವಲ್ಲಿಗಳನ್ನು ನೋಡುವುದು ಅನಿವಾರ್ಯವಾಗಿದೆ.

ಸಗಣಿಯಲ್ಲಿ ಮಾನವನ ದೇಹದ ಮೇಲೆ ದುಷ್ಪರಿಣಾಮ ಬೀರುವಂತಹ ಹಲವಾರು ಬ್ಯಾಕ್ಟೀರಿಯಾಗಳನ್ನು, ಹಾಗೂ ಮನೆಯೊಳಗೆ ಪ್ರವೇಶಿಸುವ ಹಲವಾರು ವಿಷ ಕ್ರಿಮಿಗಳನ್ನು ತಡೆಯುವಂತಹ ಬ್ಯಾಕ್ಟೀರಿಯಾ ನಿರೋಧಕ ಅಂಶವಿರುತ್ತದೆ. ಆದ್ದರಿಂದ ಮನೆಯ ಮುಂದೆ ಸಗಣಿಯಿಂದ ಸಾರಿಸಿದರೆ ಆ ಮನೆಯವರ ಆರೋಗ್ಯಕ್ಕೆ ಒಳ್ಳೆಯದು. ಕ್ರಿಮಿನಾಶಕವಾಗಿ ಅದು ಕೆಲಸಮಾಡುತ್ತದೆ ಎಂಬ ಸ್ಪಷ್ಟ ಕಾರಣಕ್ಕಾಗಿಯೇ ಅದರ ಬಳಕೆಯನ್ನು ಮಾಡುತ್ತ ಬಂದಿರುತ್ತಾರೆ.