ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ..!

0
627

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಛೇರಿಯಲ್ಲಿ ಪ್ರಸ್ತುತ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ
ಶೀಘ್ರಲಿಪಿಗಾರರು -15 ಹುದ್ದೆಗಳು (ಉಳಿದ ಮೂಲ ವೃಂದದ ಹುದ್ದೆಗಳು-10 ಮತ್ತು ಸ್ಧಳೀಯ ವೃಂದದ ಹುದ್ದೆಗಳು-05)

ಪ್ರಮುಖ ದಿನಾಂಕಗಳು
• ಅಂಚೆ ಮೂಲಕ ಅರ್ಜಿಗಳನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಗೆ ನಿಗಧಿ ಪಡಿಸಿದ ಕೊನೆಯ ದಿನಾಂಕ: 31.08.2017.
• ಅರ್ಜಿ ಸಲ್ಲಿಸಲು ನಿಗಧಿ ಪಡಿಸಿದ ಕೊನೆಯ ದಿನಾಂಕ: 11.09.2017

ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ ಶೈಕ್ಷಣಿಕ ವಿದ್ಯಾರ್ಹತೆ:-

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕೆಳಕಂಡ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ಸದರಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಅರ್ಜಿಯ ನಿಗದಿತ ಅಂಕಣದಲ್ಲಿ ಸ್ಪಷ್ಟವಾಗಿ ನಮೂದಿಸಿರಬೇಕು ಹಾಗೂ ಅವುಗಳ ಒಂದೊಂದು ಛಾಯಾ (ಫೋಟೋ) ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

1. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

2. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ

ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರಲಿಪಿ ಪರೀಕ್ಷೆ ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ ಶ್ರೇಣಿ: ರೂ. 16000-29600/-

ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಈ ಕೆಳಗಿನಂತೆ ವರ್ಗಾವಾರು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ವರ್ಗ: 35 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ-1: 40 ವರ್ಷಗಳು

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‍ಸೈಟ್ www.ksat.kar.nic.in ನಲ್ಲಿ ನೀಡಲಾಗಿರುವ ಅಧಿಸೂಚನೆಯನ್ನು ನೋಡುವುದು.