ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ 590 ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
515

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಜೀವ ವಿಮಾ ನಿಗಮ 590 ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 22,2019ರೊಳಗೆ ಅಧಿಕೃತ ವೆಬ್‌ಸೈಟ್- ನಲ್ಲಿ ಅರ್ಜಿ ಸಲ್ಲಿಸಬೇಕು.

Also read: ಪಿಯುಸಿ ಅಥವಾ ಪದವಿ ಮಾಡಿದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ; ವಿವಿಧ 35,277 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ

ಸಂಸ್ಥೆ (Organisation): ಭಾರತೀಯ ಜೀವ ವಿಮಾ ನಿಗಮ (LIC)

ವಿದ್ಯಾರ್ಹತೆ (Educational Qualification): ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಗ್ಯಾಜುಯೇಶನ್ ಅಥವಾ ಪದವಿ ಮತ್ತು ಸಿಎ ಜೊತೆಗೆ ಸ್ನಾನಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವೇತನ (Salary Scale): ತಿಂಗಳಿಗೆ 56,000/-ರೂ

ವಯೋಮಿತಿ: ಈ ಹುದ್ದೆಗಳಿಗೆ ಮಾರ್ಚ್ 1,2019 ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ , ಮೆಡಿಕಲ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ: ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್
https://www.licindia.in/Home.aspx -ನಲ್ಲಿ ಅರ್ಜಿ ಸಲ್ಲಿಸಬೇಕು.