ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
439

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜೂನ್ 12,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ 280 ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ವಿಶೇಷ ಕೇಡರ್ ಅಧಿಕಾರಿಗಳು

ಸಂಸ್ಥೆ (Organisation): ಸ್ಟೇಟ್ ಬ್ಯಾಂಕ್ ಇಂಡಿಯಾ (SBI)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಎಂಬಿಬಿಎಸ್‌, ಸ್ನಾತಕೋತ್ತರ ಪದವಿ ಮತ್ತು ಸಿಎ / ಎಂಬಿಎ/ ಪಿಜಿಡಿಎಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 12, 2019

ವಯೋಮಿತಿ: ಹುದ್ದೆಗಳಿಗನುಸಾರ 27 ರಿಂದ ಗರಿಷ್ಟ 63 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. SC/ST ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಡಿ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ, ಓಬಿಸಿ ಅಭ್ಯರ್ಥಿಗಳು 750/-ರೂ ಮತ್ತು SC/ST ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಹೋಗಿ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 12,2019ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://www.sbi.co.in/webfiles/uploads/files/careers/20052019_ADVT%20CRPD-SCO-2019-20–07%20BMO%20&%20%20Others.pdf ಕ್ಲಿಕ್ ಮಾಡಿ.