ಕರ್ನಾಟಕ ರಾಜ್ಯ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
183

ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ(ಕೆಎಸ್‌ಪಿ)ಯಲ್ಲಿ ಖಾಲಿ ಇರುವ 300 ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 06- 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್
  • ವಿದ್ಯಾರ್ಹತೆ: ಯುಜಿಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯಗಳಲ್ಲಿ ಪದವಿ ಅಥವಾ ತತ್ಸಮಾನ
  • ವಯೋಮಿತಿ: ಕನಿಷ್ಠ 21 ವರ್ಷ ಗರಿಷ್ಠ 28 ವರ್ಷ ವಯೋಮಿತಿ ಮೀರಿರಬಾರದು. ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗ ಗರಿಷ್ಠ 30 ವರ್ಷ.

  • ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜೂನ್ 08-11-2019 ರೊಳಗೆ ಪಾವತಿಸಬಹುದು.
  • ಆಯ್ಕೆ ಪ್ರಕ್ರಿಯೆ: ಬರಹ ಪರೀಕ್ಷೆ, ಭೌತಿಕ ಸಹಿಷ್ಣು ಪರೀಕ್ಷೆ ಮತ್ತು ದಕ್ಷತೆ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ: https://www.ksp.gov.in/ ಈ ‌ಲಿಂಕ್‌ಗೆಭೇಟಿ ನೀಡಿ.
  • ಅರ್ಜಿ ಸಲ್ಲಿಕೆ ವಿಧಾನ: ಮೇಲಿನ ಅರ್ಹತೆಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳು ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಬಹುದು.