ಜನಾರ್ದನ ರೆಡ್ಡಿ ಕಚೇರಿಗಳ ಮೇಲೆ ಐಟಿ ದಾಳಿ!!

0
742

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಎಎಂಸಿ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ.

ಜನಾರ್ದನ ರೆಡ್ಡಿ ಇತ್ತೀಚೆಗೆ ತಮ್ಮ ಮಗಳಾದ ಬ್ರಹ್ಮಿಣಿ ಮದುವೆಯನ್ನು ಸುಮಾರು 500 ಕೋಟಿ ರೂಪಾಯಿ ವೆಚ್ಚ ಮಾಡಿ ಮದುವೆ ಮಾಡಿದ್ದಾರೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ದೂರು ದಾಖಲಿಸಿದ್ದರು.

ಕೋಟ್ಯಂತರ ರೂಪಾಯಿ ವ್ಯಯಿಸಿ ಅದ್ದೂರಿಯಾಗಿ ಮಗಳ ಮದುವೆ ಮಾಡಿ ಎಲ್ಲರ ಹುಬ್ಬೇರಿಸಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸೇರಿದ ಎರಡು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಸೋಮವಾರ ದಿಢೀರ್ ದಾಳಿ ನಡೆಸಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುವಾಸ ಅನುಭವಿಸಿದ್ದು, ಅವರ ಎಲ್ಲಾ ಆಸ್ತಿ, ಬ್ಯಾಂಕ್ ಖಾತೆಯನ್ನು ಸಿಬಿಐ ಮುಟ್ಟುಗೋಲು ಹಾಕಿಕೊಂಡಿತ್ತು. ಹಾಗಿದ್ದ ಮೇಲೆ ಅದ್ದೂರಿ ಮದುವೆ ಮಾಡಲು ಹಣ ಎಲ್ಲಿಂದ ಬಂತು, ಹಣದ ಮೂಲದ ಬಗ್ಗೆ ತನಿಖೆಯಾಗಬೇಕೆಂದು ನರಸಿಂಹಮೂರ್ತಿ ಅವರು ದೂರಿನಲ್ಲಿ ಮನವಿ ಮಾಡಿದ್ದರು.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಒಡೆತನದ ಒಎಂಸಿ ಹಾಗೂ ಎಎಂಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದ ವರದಿ ವಿವರಿಸಿದೆ.

ಬಳ್ಳಾರಿಯಲ್ಲಿರುವ ಎಎಂಸಿ, ಒಎಂಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ಐದು ಜನ ಅಧಿಕಾರಿಗಳ ತಂಡ ಸದ್ಯಕ್ಕೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ನಿಂದ ಬಂಧಿಸಲ್ಪಟ್ಟು ಜೈಲು ಸೇರಿ ತದನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಐದು ವರ್ಷಗಳ ಬಳಿಕ ತವರೂರು ಬಳ್ಳಾರಿಗೆ ನವೆಂಬರ್ 2ರಂದು ಕಾಲಿಟ್ಟರು.

ಮಗಳ ಮದುವೆಗಾಗಿ ಬಳ್ಳಾರಿಗೆ ಹೋಗಲು ಸುಪ್ರೀಂಕೋರ್ಟ್ ಅನುಮತಿ ನೀಡಿದ್ದು, ನವೆಂಬರ್ 22ರ ತನಕ ಬಳ್ಳಾರಿಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನೆಲೆಸಬಹುದಾಗಿದೆ.