ಇಂದಿರಾ ಕ್ಯಾಂಟೀನ್-ಗೆ ಬೆಂಗಳೂರನ್ನು ಕಟ್ಟಿದ ಕೆಂಪೇಗೌಡರ ಹೆಸರನ್ನಿಡಲು ಮುಂದಾದ ಸರ್ಕಾರ, ಈ ನಡೆಗೆ ನೀವು ಒಪ್ಪುತ್ತೀರಾ??

0
1704

ರಾಜ್ಯದಲ್ಲಿ ಉಪಚುನಾವಣೆ ರಂಗೆರುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವು ಬರವಸೆಗಳು ಕೇಳಿ ಬರುತ್ತಿವೆ, ಅದರಲ್ಲಿ ಇಂದಿರಾ ಕ್ಯಾಂಟೀನ್‍ಗ ವಿಚಾರ ಎದ್ದು ಕೇಳಿ ಬರುತ್ತಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಪ್ರಾರಂಭವಾದ ಕ್ಯಾಂಟೀನ್ ಬಿಜೆಪಿ ಸರ್ಕಾರದಲ್ಲಿ ಮುಚ್ಚಲಿವೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು, ಆದರೆ ಈಗ ಮತ್ತೊಂದು ಸುದ್ದಿ ಹರಡಿದ್ದು ಇಂದಿರಾ ಕ್ಯಾಂಟೀನ್‍ಗೆ ಕೆಂಪೇಗೌಡ ಹೆಸರಿಡಲು ಮುಂದಾಗಿರುವ ಬಿಜೆಪಿ ಉಪ ಚುನಾವಣೆಯಲ್ಲಿ ಒಕ್ಕಲಿಗರ ಮತ ಸೆಳೆಯಲು ಹೊಸ ಪ್ಲ್ಯಾನ್ ರೂಪಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Also read: ಪೊಲೀಸರು ಮಹಿಳೆಯರನ್ನು ಬಂಧಿಸುವ ಸಯಮದಲ್ಲಿ ಮಹಿಳೆಯರಿಗೆ ಇರುವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬ ಮಹಿಳೆ ತಿಳಿದಿರಬೇಕು.!

ಇಂದಿರಾ ಕ್ಯಾಂಟೀನ್‍ಗೆ ಕೆಂಪೇಗೌಡ ಹೆಸರು?

ಹೌದು ಇಂದಿರಾ ಕ್ಯಾಂಟೀನ್ ಹೆಸರನ್ನು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣಕ್ಕೆ ಮಾಡುವಂತೆ ಶೀಘ್ರದಲ್ಲಿಯೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಉಪಮೇಯರ್ ರಾಮ್ ಮೋಹನ್ ರಾಜ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಸದ್ಯ ಇಂದಿರಾ ಕ್ಯಾಂಟೀನ್ ಗೆ ರೀ ಟೆಂಡರ್ ಆಹ್ವಾನಿಸಲಾಗಿದೆ. ಇಂದಿರಾ ಕ್ಯಾಂಟಿನ್ ಎಂದರೇನೆ ಜನ ಊಟಕ್ಕೆ ಹೋಗ್ತಿಲ್ಲ. ಹೀಗಾಗಿ ನಾಡಪ್ರಭು ಕೆಂಪೇಗೌಡರ ಹೆಸರಿಡಲು ಚಿಂತಿಸಿದ್ದೇವೆ ಎಂದು ತಿಳಿಸಿದ್ದಾರೆ. 2017ರಲ್ಲಿ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್‍ಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬದಲಾಗಿ ನಾಡಪ್ರಭು ಕೆಂಪೇಗೌಡ ಹೆಸರಿಡಲು ಬಿಜೆಪಿ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಕ್ಯಾಂಟೀನ್ ನಿರ್ವಹಣೆಗೆ ಶೇ.25 ರಷ್ಟು ಅನುದಾನ ಮಾತ್ರ ಕೊಡಲು ಒಪ್ಪಿದೆ. ಹೀಗಾಗಿ ಹೆಚ್ಚಿನ ಅನುದಾನ ಪಡೆಯುವ ಉದ್ದೇಶದಿಂದ ಉಪ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಕ್ಯಾಂಟೀನ್ ಹೆಸರು ಬದಲಾಯಿಸಲು ಸರ್ಕಾರದ ಮುಂದೆ ಪ್ರಸ್ತಾವನೆ ಇಡಲು ಚಿಂತನೆ ನಡೆದಿದೆ ಎನ್ನುವ ಮಾಹಿತಿ ವೈರಲ್ ಆಗಿದೆ.

Also read: ಭಾರತೀಯ ವಾಯುಪಡೆಯಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ಮಗನ ನೆನಪಿಗಾಗಿ 350 ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿರುವ ದಂಪತಿಗಳು.!

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್, ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಮನವಿಗೆ ರಾಜ್ಯ ಸರ್ಕಾರ ನಕಾರ ಎಂದಿದೆ. ಕೇವಲ ಶೇ. 25ರಷ್ಟು ಅನುದಾನ ಕೊಡುವುದಕ್ಕೆ ಸರ್ಕಾರದ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಶೇ. 100ರ ಬದಲು ಐವತ್ತು ಪರ್ಸೆಂಟ್ ಆದರೂ ಅನುದಾನ ಕೊಡುವಂತೆ ಮನವಿ ಮಾಡಲಾಗಿದೆ ಎಂದು ಈ ಹಿಂದೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರ ಅವಧಿಯು ಆಗಸ್ಟ್ ತಿಂಗಳಿಗೆ ಮುಗಿದಿದ್ದು, ಹೊಸ ಟೆಂಡರ್ ಕರೆಯುವವರೆಗೂ ಹಳೆಯ ಗುತ್ತಿಗೆದಾರರನ್ನೇ ಮುಂದುವರಿಸುವಂತೆ ಮನವಿ ಮಾಡಿದ್ದಾರೆ. ಈ ಮಧ್ಯೆ ಇಂದಿರಾ ಕ್ಯಾಂಟೀನ್‍ನ ಅವ್ಯವಹಾರ ಆರೋಪದ ಹಿನ್ನಲೆ ಸರ್ಕಾರ ತನಿಖೆಗೂ ಆದೇಶ ನೀಡಿದೆ. ಆದರೆ 150 ಕೋಟಿ ರೂ. ಇಂದಿರಾ ಕ್ಯಾಂಟೀನ್ ನಿರ್ವಹಣಾ ವೆಚ್ಚ ಬಿಬಿಎಂಪಿಗೆ ಹೊರೆಯಾಗಿದೆ ಎಂದು ಹೇಳಿದ್ದರು.

Also read: ಅಮ್ಮನಿಗಾಗಿ ವರ ಬೇಕೆಂದು ಫೇಸ್ಬುಕ್-ನಲ್ಲಿ ಮಗನ ಪೋಸ್ಟ್; ಒಂಟಿಯಾಗಿರುವ ತಂದೆ-ತಾಯಿಗಳಿಗೆ ಮಕ್ಕಳೇ ಮದುವೆ ಮಾಡುತ್ತಿರುವುದಕ್ಕೆ ನೀವೇನ್ ಅಂತಿರಾ.?

ಈ ಹಿಂದೆ ಇಂದಿರಾ ಕ್ಯಾಂಟೀನ್‍ಗಳಿಗೆ ಅನ್ನಪೂರ್ಣ ಕ್ಯಾಂಟೀನ್ ಎಂದು ಹೆಸರು ಬದಲಾಯಿಸುವ ನಿರ್ಧಾರದ ಸುಳಿವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಕೊಟ್ಟಿದ್ದರು. ಜುಲೈನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮಾತನಾಡಿದ್ದ ಸಚಿವರು, ಮೈತ್ರಿ ಅವಧಿಯಲ್ಲಿ ಕೆಲವು ರಾಜಕೀಯ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಹೀಗಾಗಿ ನಾವು ಕೂಡ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಕ್ಯಾಬಿನೆಟ್ ಸಭೆಯಲ್ಲಿ ಕೆಲವೊಂದು ವಿಷಯಗಳ ಬಗ್ಗೆ ನಿರ್ಧಾರ ತಗೆದುಕೊಳ್ಳಲಾಗುತ್ತದೆ. ಮೈತ್ರಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಕೈಬಿಡಲು ಬರಲ್ಲ. ಹಾಗೇ ಎಲ್ಲಾ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲು ಸಾಧ್ಯವಿಲ್ಲ. ಈ ಸಂಬಂಧ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು. ಇವೆಲ್ಲ ಬೆಳವಣಿಗೆ ನೋಡಿದರೆ ಒಂದು ಇಂದಿರಾ ಕ್ಯಾಂಟೀನ್ ಮುಚ್ಚುತ್ತೇವೆ ಇಲ್ಲ ಹೆಸರು ಬದಲಾವಣೆಯಾಗುತ್ತೆ ಎನ್ನುವುದು ಖಚಿತವಾಗಿದೆ. ಒಟ್ಟಾರೆಯಾಗಿ ಬಡವರಿಗೆ ಅನುಕೂಲವಾಗುವುದು ಒಳ್ಳೆಯದು.