ಮೈಸೂರು ಜಿಲ್ಲಾ ಕಂದಾಯ ಇಲಾಖೆಯಲ್ಲಿ 70 ಗ್ರಾಮಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
361

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಮೈಸೂರು ಜಿಲ್ಲಾ ಕಂದಾಯ ಘಟಕದ ವಿವಿಧ ತಾಲ್ಲೂಕು ಕಛೇರಿಗಳಲ್ಲಿ ಗ್ರೂಪ್ ಸಿ ವೃಂದದ ಖಾಲಿ ಇರುವ 70 ಗ್ರಾಮಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 28,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕೇಂದ್ರ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಬಂಪರ್; ಜುಲೈ ಅಂತ್ಯಕ್ಕೆ ಸಿಗಲಿದೆ ನಿರೀಕ್ಷೆಗಿಂತ ಹೆಚ್ಚಿನ ವೇತನ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರಾಮಲೆಕ್ಕಿಗ

ಸಂಸ್ಥೆ (Organisation):ಕಂದಾಯ ಇಲಾಖೆ

ಉದ್ಯೋಗ ಸ್ಥಳ (Job Location): ಮೈಸೂರು ಜಿಲ್ಲೆ (ಕರ್ನಾಟಕ)

ವಿದ್ಯಾರ್ಹತೆ (Educational Qualification): ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ
ತೇರ್ಗಡೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಗಣಕಯಂತ್ರ ನಿರ್ವಹಣೆ ಬಗ್ಗೆ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.

ವಯೋಮಿತಿ: (Age) ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ ೧೨ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date) August 28, 2019

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 300/-ರೂ. SC-ST ಅಭ್ಯರ್ಥಿಗಳಿಗೆ 25/ ರೂ. ಪ್ರವರ್ಗ ಅಭ್ಯರ್ಥಿಗಳಿಗೆ 150/ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ /ಡೆಬಿಟ್ ಕಾರ್ಡ್‌ / ಕ್ರೆಡಿಟ್ ಕಾರ್ಡ್ / ಚಲನ್ ಹಾಗೂ ಇತ್ಯಾದಿಗಳ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಗೆ ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಮೈಸೂರು ಜಿಲ್ಲೆಯ ಅಧಿಕೃತ ವೆಬ್‌ಸೈಟ್‌ https://mysore.nic.in/en/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 28,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://mysore.nic.in/en/ ಕ್ಲಿಕ್ ಮಾಡಿ.