ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ..

0
427

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಜುಲೈ 27,2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರಾಮಲೆಕ್ಕಿಗ

ಸಂಸ್ಥೆ (Organisation): ಕಂದಾಯ ಇಲಾಖೆ

ಉದ್ಯೋಗ ಸ್ಥಳ (Job Location): ಚಿಕ್ಕಬಳ್ಳಾಪುರ ಜಿಲ್ಲೆ (ಕರ್ನಾಟಕ)

ಉದ್ಯೋಗ ಸ್ಥಳ (Salary Scale): 21,400/- ರಿಂದ 42,000/-ರೂ ವೇತನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): July 27, 2019

ವಿದ್ಯಾರ್ಹತೆ (Educational Qualification): ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ
ತೇರ್ಗಡೆ ಹೊಂದಿರಬೇಕು ಹಾಗೂ ಕನ್ನಡ ಮತ್ತು ಆಂಗ್ಲ ಭಾಷೆಯ ಗಣಕಯಂತ್ರ ನಿರ್ವಹಣೆ ಬಗ್ಗೆ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.

ಯೋಮಿತಿ: ಕನಿಷ್ಟ 18 ರಿಂದ 40 ವರ್ಷ ವಯೋಮಿತಿಯೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿಧವೆ / ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಸಶಸ್ತ್ರ ದಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವವರೋ ಅದಕ್ಕೆ 3ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಿದ ಪರಿಶಿಷ್ಟ ಪಂಗಡ,ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ.100/-ರೂ ಗಳನ್ನು ಜಿಲ್ಲಾಧಿಕಾರಿಗಳು,ಚಿಕ್ಕಬಳ್ಳಾಪು ಜಿಲ್ಲೆ ರವರ State Bank of india, Chikkaballapur ಶಾಖೆಯಲ್ಲಿನ ಉಳಿತಾಯ ಖಾತೆ: 64030323576 ಗೆ (IFSC Code SBIN 0040082) ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮುಂಚೆ ಪಾವತಿ ಮಾಡಬೇಕು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ
ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಚಿಕ್ಕಬಳ್ಳಾಪು ಜಿಲ್ಲೆಯ ಅಧಿಕೃತ ವೆಬ್‌ಸೈಟ್‌ https://chikkaballapur.nic.in/en/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 27,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.