ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆಯಲ್ಲಿ ನೇರ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ..

0
567

ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಬಾಗಲಕೋಟೆ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 4,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರಾಮಲೆಕ್ಕಿಗ

ಸಂಸ್ಥೆ (Organisation): ಕಂದಾಯ ಇಲಾಖೆ

ಉದ್ಯೋಗ ಸ್ಥಳ (Job Location): ಬಾಗಲಕೋಟೆ (ಕರ್ನಾಟಕ)

ವಿದ್ಯಾರ್ಹತೆ (Educational Qualification): ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ: (age) ಕನಿಷ್ಟ 18 ರಿಂದ ಸಾಮಾನ್ಯ ಅಭ್ಯರ್ಥಿಗಳು ಗರಿಷ್ಟ 35 ವರ್ಷ, 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು ಗರಿಷ್ಟ 38 ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ (Selection method): ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ ೧೨ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ

ಅರ್ಜಿ ಶುಲ್ಕ (Fee): ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.50/- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆಯ ಅಧಿಕೃತ ವೆಬ್‌ಸೈಟ್‌ https://bagalkot.nic.in/ ನಲ್ಲಿ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ. ಜುಲೈ 4,2019 ರೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): July 4, 2019.

ಹೆಚ್ಚಿನ ಮಾಹಿತಿಗಾಗಿ: http://bagalkot-va.kar.nic.in/helpMain.aspx ಇಲ್ಲಿ ಕ್ಲಿಕ್ ಮಾಡಿ.