ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಲಹೆಗಾರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
386

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ನೇಮಕಾತಿ ಸಲಹೆಗಾರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ ಮೂಲಕ ಜೂನ್ 14,2019 ರಂದು ನಡೆಯುವ ವಾಕ್-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು.

Also read: ಇಂಡಿಯನ್ ಏರ್ ಫೋರ್ಸ್‌ (IAF) 242 ಕಮಿಷನ್ಡ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸಲಹೆಗಾರ

ಸಂಸ್ಥೆ (Organisation): ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್

ವಿದ್ಯಾರ್ಹತೆ (Educational Qualification): ಸಮಾಲೋಚಕ ಹುದ್ದೆಗಳಿಗೆ ಎಂ.ಎಸ್ಸಿ, ಸ್ನಾತಕೋತ್ತರ ಪದವಿ,ಪದವಿ ಮತ್ತು ಬಿ.ಇ / ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಗುಂಪು ಚರ್ಚೆಯ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://rdpr.kar.nic.in/index.asp ನಲ್ಲಿ ಹುದ್ದೆಗಳಿಗೆ ಕೇಳಲಾಗಿರುವ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 14,2019 ರಂದು ಬೆಳಗ್ಗೆ 11 ಗಂಟೆಯಿಂದ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ: http://rdpr.kar.nic.in/document/Walkin_Interview.pdf ಕ್ಲಿಕ್ ಮಾಡಿ.