2019ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಲು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್​ ರಮಫೊಸಾ ಒಪ್ಪಿಗೆ..

0
677

2019 ನೇ ಸಾಲಿನ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್​ ರಮಫೊಸಾ ಆಗಮಿಸಲಿದ್ದಾರೆ. ಆಮಂತ್ರಣವನ್ನು ಸ್ವೀಕರಿಸಿರುವ ಅವರು ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಆದಕಾರಣ ರಮಫೊಸಾ ಅವರನ್ನು ಅಂತಿಮಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

Also read: ಭಾರತೀಯ ಜೀವ ವಿಮಾ ನಿಗಮದ ಹೊಸ ಯೋಜನೆ; ತಿಂಗಳಿಗೆ 518 ರೂ. ಪಾವತಿಸಿದರೆ ಸಿಗಲಿವೆ ಹಲವಾರು ಲಾಭಗಳು..!

ಆಫ್ರಿಕಾದ ಗಾಂಧಿ ಎಂದೇ ಖ್ಯಾತರಾಗಿದ್ದ ನೆಲ್ಸನ್ ಮಂಡೇಲಾ ಅವರ ಆಪ್ತರಾಗಿರುವ ಸಿರಿಲ್ ರಮಫೊಸಾ ಅವರನ್ನು ಸ್ವತಃ ನೆಲ್ಸನ್ ಮಂಡೇಲಾ ಅವರು ಮುಂದಿನ ದಕ್ಷಿಣ ಆಫ್ರಿಕಾದ ಅಧ್ಯಕ್ಷೀಯ ಗಾದಿಗೆ ಶಿಫಾರಸ್ಸು ಮಾಡಿದ್ದರು. ಸಿರಿಲ್ ರಮಫೊಸಾ ಕೂಡ ಗಾಂಧಿವಾದಿಗಳಾಗಿದ್ದು, ಇದೇ ಕಾರಣಕ್ಕೆ ಭಾರತ ಸರ್ಕಾರ ಅವರನ್ನು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಮನವಿ ಮಾಡಿತ್ತು ಎನ್ನಲಾಗಿದೆ.

ಹೌದು ಕಳೆದ ಏಪ್ರಿಲ್​ನಲ್ಲಿ ವಾಷಿಂಗ್ಟನ್​​ನಲ್ಲಿ ನಡೆದ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಗೆ 2019 ರ ಜನವರಿ 26 ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಿದ್ದರು. ಜನವರಿ ಅಂತ್ಯದಲ್ಲಿ ಟ್ರಂಪ್​ ಚಳಿಗಾಲದ ಅಧಿವೇಶನದಲ್ಲಿ ಹಾಗೂ ಸರ್ಕಾರಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಬ್ಯುಸಿ ಇರುವುದರ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸದ ಅತಿಥಿಯಾಗಲು ಟ್ರಂಪ್​ ನಿರಾಕರಿಸಿದ್ದರು.

ಈ ಬೆನ್ನಲ್ಲೇಯಲ್ಲಿ ಭಾರತ ಸರ್ಕಾರ ಆಫ್ರಿಕನ್ ಮುಖಂಡರತ್ತ ಆಮಂತ್ರಣ ನೀಡಿತ್ತು. ಮೂಲಗಳ ಪ್ರಕಾರ ಆಫ್ರಿಕಾದ ಗಣ್ಯರೊಬ್ಬರು ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿತು. ಆದರೆ ರಮಫೋಸಾ ಅವರು ಬರುವದಾಗಿ ಒಪ್ಪಿಗೆ ನೀಡಿರಲಿಲ್ಲ. ಆದಕಾರಣ ಅವರ ನಿರ್ಧಾರಕ್ಕೆ ಕಾಯಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

Also read: ಇರಾನ್-ನಿಂದ ಭಾರತ ತೈಲ ಆಮದು ಮಾಡಿಕೊಳ್ಳಲು ವಿನಾಯಿತಿ ಕೊಟ್ಟ ಅಮೇರಿಕ; ಇನ್ಮೇಲಾದ್ರು ಪೆಟ್ರೋಲ್ ಬೆಲೆ ಕಡಿಮೆಯಾಗುತ್ತ?

ಇಂದಿಗ ಕೇಂದ್ರ ಸರ್ಕಾರದ ಮೂಲಗಳು ತಿಳಿಸಿರುವಂತೆ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ಸರ್ಕಾರ ಮಾಡಿದ್ದ ಮನವಿಯನ್ನು ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ ಅವರು ಸ್ವೀಕರಿಸಿದ್ದು, ಭಾರತಕ್ಕೆ ಆಗಮಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.