ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದಗಳಿಗೆ ನೇಮಕಾತಿ ಪ್ರಕಟಣೆ..

0
226

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಮ್ಯಾನೇಜ್ಮೆಂಟ್ ಟ್ರೈನಿ ( ಅಡ್ಮಿನಿಸ್ಟ್ರೇಷನ್ ) ಹುದ್ದಗಳಿಗೆ ನೇಮಕಾತಿ ಹೊರಡಿಸಿ ಅರ್ಜಿ ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ನಲ್ಲಿ ಜೂನ್ 18,2019 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

Also read: ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಮ್ಯಾನೇಜ್ಮೆಂಟ್ ಟ್ರೈನಿ ( ಅಡ್ಮಿನಿಸ್ಟ್ರೇಷನ್ )

ಸಂಸ್ಥೆ (Organisation): ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್‌)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಪದವಿ, ಎಂಬಿಎ / ಸ್ನಾತಕೋತ್ತರ ಪದವಿ ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ನವದೆಹಲಿ,ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 18, 2019

ವಯೋಮಿತಿ: ಜೂನ್ 14,2019ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯೂಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಡಿ (ಓಬಿಸಿ-ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ಇರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಗುಂಪು ಚರ್ಚೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳು 100/-ರೂ
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್‌ನಲ್ಲಿ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಧಿಕೃತ ವೆಬ್‌ಸೈಟ್‌ https://www.sail.co.in/ ನಲ್ಲಿ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಭರ್ತಿ ಮಾಡುವ ಮೂಲಕ ಜೂನ್ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://www.sailcareers.com/media/uploads/Final_English_detailed_advt_for_MT_Admn_-2019_2.pdf ಕ್ಲಿಕ್ ಮಾಡಿ.