ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ..

0
118

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಸೆಪ್ಟೆಂಬರ್ 19,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಬ್ಯಾಂಕ್ ವೈದ್ಯಕೀಯ ಅಧಿಕಾರಿ

ಸಂಸ್ಥೆ (Organisation): ಸ್ಟೇಟ್ ಬ್ಯಾಂಕ್ ಇಂಡಿಯಾ (ಎಸ್‌ಬಿಐ)

ವಿದ್ಯಾರ್ಹತೆ (Educational Qualification): ಮಾರ್ಚ್ 31,2019ರ ಅನ್ವಯ ಮೆಡಿಕಲ್ ಕೌನ್ಸಿಲ್‌ನಿಂದ ಮಾನ್ಯತೆ ಪಡೆದ ಯಾವುದೇ ಕಾಲೇಜು ಅಥವಾ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್‌ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಮಾರ್ಚ್ 31,2019ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: Application End Date September 19, 2019

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 19,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://sbi.co.in/ ಕ್ಲಿಕ್ ಮಾಡಿ.