ಶಬರಿಮಲೆ ಮಹಿಳೆಯರ ಪ್ರವೇಶ ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದ ಸುಪ್ರೀಂಕೋರ್ಟ್; ಹಿಂದೂಗಳಿಗೆ ಸೀಮಿತವಲ್ಲ ಎಲ್ಲ ಧರ್ಮಗಳಿಗೂ ಅನ್ವಯ.!

0
207

ಬಹುದಿನಗಳಿಂದ ವಿವಾದಕ್ಕೆ ಕಾರಣವಾದ ಶಬರಿಮಲೆ ಪ್ರಕರಣಕ್ಕೆ ಇಂದು ಸುಪ್ರಿಂಕೋರ್ಟ್ ಮಹತ್ವದ ತೀರ್ಪು ನೀಡುತ್ತಾ ಎನ್ನುವ ನಿರೀಕ್ಷೆಯಲ್ಲಿ ಇಡಿ ಭಕ್ತ ಮಂಡಳಿ ಕಾದುಕುಳಿತಿತ್ತು, ಅದರಂತೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಕುರಿತು ಸುಪ್ರೀಂಕೋರ್ಟ್​ ತನ್ನ ತೀರ್ಮಾನ ಪ್ರಕಟಿಸಿದ್ದು ಶಬರಿಮಲೆ ವಿಚಾರ ಕೇವಲ ಹಿಂದೂ ಧರ್ಮದ ದೇವಾಲಯಕ್ಕೆ ಮಾತ್ರ ಸೀಮಿತವಲ್ಲ. ಮುಸ್ಲಿಂ ಧರ್ಮದ ಮಹಿಳೆ ಮಸೀದಿ ಪ್ರವೇಶಕ್ಕೂ ಇದು ಅನ್ವಯವಾಗುತ್ತದೆ. ಪಾರ್ಸಿ ಧರ್ಮಕ್ಕೂ ಅನ್ವಯವಾಗುತ್ತದೆ. ಹೀಗಾಗಿ ಈ ಪ್ರಕರಣದ ಬಗ್ಗೆ ದೀರ್ಘ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

Also read: ಬಿಗ್ ಬ್ರೇಕಿಂಗ್: ಅನರ್ಹ ಶಾಸಕರಿಗೆ ಬಿಗ್ ರಿಲೀಫ್, ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ಸುಪ್ರಿಂಕೋರ್ಟ್ ಹೇಳಿದ್ದೇನು??

ಹೌದು ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಕುರಿತು ಸುಪ್ರೀಂಕೋರ್ಟ್​ ತನ್ನ ತೀರ್ಮಾನ ಪ್ರಕಟಿಸಿ ಈ ಪ್ರಕರಣವನ್ನು ಏಳು ಸದಸ್ಯರ ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂಕೋರ್ಟ್​ ಆದೇಶ ಹೊರಡಿಸಿ “ಧರ್ಮದಲ್ಲಿ ಗಂಡು ಹೆಣ್ಣಿಗೆ ಸಮಾನ ಹಕ್ಕಿದೆ. ಗಂಡು-ಹೆಣ್ಣು ಇಬ್ಬರು ಸಮಾಜದಲ್ಲಿ ಸರಿಸಮಾನರು. ಧರ್ಮದ ವಿಮರ್ಶೆಗೆ ಅರ್ಜಿ ಹಾಕಲಾಗಿದೆ,” ಎಂದು ರಂಜನ್​ ಗೋಗೋಯ್​ ಅಭಿಪ್ರಾಯಪಟ್ಟರು. ನಂತರ ಶಬರಿಮಲೆ ತೀರ್ಪು 7 ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದರು. ನ್ಯಾ. ಚಂದ್ರಚೂಡ್​, ನ್ಯಾ. ನಾರಿಮನ್​ಅವರು ಶಬರಿಮಲೆ ದೇಗುಲ ಮಹಿಳೆಯರ ಪ್ರವೇಶಕ್ಕೆ ನಿರಾಕರಣೆ ಮಾಡಿದರು.

ಉಳಿದ ಮೂವರು ನ್ಯಾಯಮೂರ್ತಿಗಳು ಮಹಿಳೆಯರ ಪ್ರವೇಶವನ್ನು ಬೆಂಬಲಿಸಿದರು. ಶಬರಿಮಲೆ ಪ್ರಕರಣದಲ್ಲಿ ತೀರ್ಪು ನೀಡಿದರೆ ಉಳಿದ ಧರ್ಮದಲ್ಲಿ ಯಾಕೆ ಪ್ರವೇಶ ಇಲ್ಲ. ಅಲ್ಲೂ ಮಹಿಳೆಯರಿಗೆ ಸಮಾನ ಹಕ್ಕು ನೀಡಬೇಕೆಂಬ ಕೂಗು ಈಗಾಗಲೇ ಎದ್ದಿದೆ. ಮಹಿಳೆಯನ್ನು ಆಕೆಯ ಲಿಂಗ ಮತ್ತು ಜೈವಿಕ ಕಾರಣಗಳಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ. ಈ ಎಲ್ಲ ವಿಚಾರಗಳ ಮೇಲೆ ಗಮನಹರಿಸಿದ ಪೀಠ ಸುದೀರ್ಘ ವಿಚಾರಣೆ ನಡೆಸಬೇಕು ಎಂದು ಹೇಳಿದೆ. 2018ರ ಸೆಪ್ಟೆಂಬರ್ 28ರಂದು ಸುಪ್ರೀಂಕೋರ್ಟಿನ ಅಂದಿನ ಸಿಜೆ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ 4:1ರ ಅನುಪಾತದಲ್ಲಿ ಎಲ್ಲಾ ವಯೋಮಾನದ ಮಳೆಯರಿಗೆ ಅಯ್ಯಪ್ಪ ದೇಗುಲಕ್ಕೆ ಪ್ರವೇಶ ಕಲ್ಪಿಸಿತ್ತು.

Also read: ಅಯೋಧ್ಯೆ ವಿವಾದದಲ್ಲಿ ರಾಮನ ಪರ ತೀರ್ಪಿಗಾಗಿ 27 ವರ್ಷ ಉಪವಾಸ ಸತ್ಯಾಗ್ರಹ ಮಾಡಿದ ಮಹಿಳೆ ಕತೆ ಹೇಗಿದೆ ನೋಡಿ.!

ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು. ಆದರೆ 2018 ರ ಸೆಪ್ಟೆಂಬರ್ ನಲ್ಲಿ ಈ ನಿಷೇಧವನ್ನು ತೆರವುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದತ್ತು. ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಹಲವು ಅರ್ಜಿಗಳು ಸುಪ್ರೀಂಕೋರ್ಟ್​ಗೆ ಸಲ್ಲಿಕೆಯಾಗಿದ್ದವು.

Also read: ರೈಲ್ವೆ ನಿಲ್ದಾಣದಲ್ಲೇ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ.!

ಅಲ್ಲದೆ, ಕೋರ್ಟ್​​ ಆದೇಶದ ನಂತರ ಮಹಿಳೆಯರು ಶಬರಿಮಲೆ ಪ್ರವೇಶಿಸಿದ ನಂತರದಲ್ಲಿ ಕೇರಳ ಉದ್ವಿಘ್ನಗೊಂಡಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತ ಮೃತಪಟ್ಟಿದ್ದ. ಸಿಪಿಐಎಂ ನಾಯಕರ ಮನೆಯ ಮೇಲೆ ಬಾಂಬ್​ ದಾಳಿ ಕೂಡ ನಡೆದಿತ್ತು. ಇದಾದ ಬೆನ್ನಲ್ಲೇ ಮತ್ತೋರ್ವ ಮಹಿಳೆ ಶಬರಿಮಲೆ ಪ್ರವೇಶಿಸಿದ್ದರು. ಈ ವಿಚಾರ ಬಿಜೆಪಿ-ಸಿಪಿಐಎಂ ನಡುವಣ ವಾಗ್ವಾದಕ್ಕೂಕಾರಣವಾಗಿತ್ತು. ಮಹಿಳೆಯನ್ನು ಆಕೆಯ ಲಿಂಗ ಮತ್ತು ಜೈವಿಕ ಕಾರಣಗಳಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ. ಈ ಎಲ್ಲ ವಿಚಾರಗಳ ಮೇಲೆ ಗಮನಹರಿಸಿದ ಪೀಠ ಸುದೀರ್ಘ ವಿಚಾರಣೆ ನಡೆಸಬೇಕು ಎಂದು ಹೇಳಿದೆ.