ಆಧಾರ್ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್..!

0
438

ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

ಕೆಲ ನಿರ್ಬಂಧವನ್ನು ವಿಧಿಸುವ ಮೂಲಕ ಸುಪ್ರೀಂಕೋರ್ಟ್ ಪಂಚ ನ್ಯಾಯಾಧೀಶರ ಪೀಠ ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿದೆ. ಅಲ್ಲದೇ ಖಾಸಗಿ ಸೌಲಭ್ಯಕ್ಕೆ ಆಧಾರ್ ಕಡ್ಡಾಯಲ್ಲ, ಸರ್ಕಾರಿ ಸೌಲಭ್ಯಗಳಿಗೆ ಮಾತ್ರ ಆಧಾರ್ ಸಂಖ್ಯೆ ಕಡ್ಡಾಯ ಎಂದು ಮಹತ್ವದ ತೀರ್ಪು ನೀಡಿದೆ.

ಆಧಾರ್ ಮೇಲಿನ ದಾಳಿ ಸಂವಿಧಾನಕ್ಕೆ ವಿರುದ್ಧವಾದದ್ದು. ಆಧಾರ್ ದತ್ತಾಂಶಗಳ ಸೋರಿಕೆ ಅಥವಾ ಅವುಗಳನ್ನು ಕಳವು ಮಾಡುವುದು ಸಂವಿಧಾನಕ್ಕೆ ವಿರುದ್ಧವಾದದ್ದು. ಆಧಾರ್ ಮಾಹಿತಿ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇನ್ನು ಸಮಾಜದ ಹಿತದೃಷ್ಟಿಯಿಂದ ಕೆಲವು ನಿರ್ಬಂಧಗಳು ಅಗತ್ಯ ಎಂದಿರುವ ಕೋರ್ಟ್, ಯೋಜನೆಗಳ ಫಲಾನುಭವಿಗಳಿಗೆ ಆಧಾರ್ ನಿಂದ ಉಪಯೋಗವಾಗುತ್ತಿದೆ. ಆಧಾರ್ ಮಾಹಿತಿಯನ್ನು ತಿರುಚಲು ಸಾಧ್ಯವಿಲ್ಲ. ಹಾಗೆಯೇ ನಕಲಿ ಆಧಾರ್ ಕಾರ್ಡ್ ಸೃಷ್ಟಿಸುವುದೂ ಸಾಧ್ಯವಿಲ್ಲ. ಹಾಗೊಂದು ಪಕ್ಷ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಲು ಸಾಧ್ಯವಿದ್ದರೆ ಅದನ್ನು ತಡೆಗಟ್ಟಲು ಪ್ರಯತ್ನಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಯಾವುದಕ್ಕೆ ಆಧಾರ್ ಕಡ್ಡಾಯ?

 • ಪ್ಯಾನ್ ನಂಬರ್ ಗೆ ಆಧಾರ್ ಜೋಡಣೆ ಕಡ್ಡಾಯ
 • ಸರ್ಕಾರಿ ಸೌಲಭ್ಯಗಳಿಗೆ ಮಾತ್ರ ಕಡ್ಡಾಯ
 • ಐಟಿ ರಿಟರ್ನ್ಸ್ ಸಲ್ಲಿಸಲು ಆಧಾರ್ ಕಡ್ಡಾಯ
 • ಯಾವುದಕ್ಕೆ ಆಧಾರ್ ಕಡ್ಡಾಯವಲ್ಲ?
 • ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯವಲ್ಲ
 • ಪೇಟಿಯಂ, ಫೋನ್ ಪೇ, ಡಿಜಿಟಲ್ ಅ್ಯಪ್ ಗಳಿಗೆ ಕಡ್ಡಾಯವಲ್ಲ
 • ಮೊಬೈಲ್ ನಂಬರ್ ಗಳಿಗೆ ಆಧಾರ್ ಕಡ್ಡಾಯವಲ್ಲ
 • ಹಣಕಾಸು ಉದ್ದೇಶಕ್ಕಾಗಿ ಆಧಾರ್ ಬಳಸುವಂತಿಲ್ಲ
 • ಮೊಬೈಲ್ ಸಿಮ್ ಖರೀದಿಗೆ ಕಡ್ಡಾಯವಲ್ಲ
 • ಖಾಸಗಿ ಶಾಲಾ, ಕಾಲೇಜು ಸೇರ್ಪಡೆಗೆ ಆಧಾರ್ ಕಡ್ಡಾಯವಲ್ಲ
 • 6 ತಿಂಗಳಿಗಿಂತ ಹೆಚ್ಚು ಕಾಲ ಆಧಾರ್ ಮಾಹಿತಿ ಸಂಗ್ರಹಿಸಿ ಇಟ್ಟುಕೊಳ್ಳುವಂತಿಲ್ಲ

ತೀರ್ಪಿನ ಸಂಬಂಧ ಮೂವರು ನ್ಯಾಯಾಧೀಶರು ಪರವಿದ್ದರೆ ಇಬ್ಬರು ಮಾತ್ರ ವಿರೋಧಿಸಿದ್ದಾರೆ ಎನ್ನಲಾಗಿದೆ. ಪಂಚಸದಸ್ಯ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ ಎಕೆ ಸಿಕ್ರಿ, ನ್ಯಾ.ಎ ಎಂ ಖಾನ್ ವಿಲ್ಕರ್, ನ್ಯಾ.ಡಿ ವೈ ಚಂದ್ರಚೂಡ್, ನ್ಯಾ. ಅಶೋಕ್ ಭೂಷಣ್ ಅವರಿದ್ದರು. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚಸದಸ್ಯ ಪೀಠ ಈ ಪ್ರಕರಣದ ವಿಚಾರಣೆಯನ್ನು ಕಳೆದ ಮಾರ್ಚ್ ತಿಂಗಳಿನಲ್ಲಿ ಆರಂಭಿಸಿತ್ತು. ಆಧಾರ್ ಸಂಖ್ಯೆಯನ್ನು ಬಹುಮುಖ್ಯ ದಾಖಲೆಗಳೊಂದಿಗೆ ಜೋಡಿಸುವುದರಿಂದ ಖಾಸಗಿ ಮಾಹಿತಿ ಸೋರಿಕೆಯಾಗುವ ಸಂಭವವಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತಿತ್ತು. ಆಧಾರ್‌ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್‌.ಪುಟ್ಟಸ್ವಾಮಿ ಸೇರಿದಂತೆ 24 ಮಂದಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಸಂವಿಧಾನ ಪೀಠವು ಸುದೀರ್ಘ ಅವಧಿಯ ವಿಚಾರಣೆ ನಡೆಸಿತ್ತು.