ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ 10 ಸಾವಿರ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಅಹ್ವಾನ

0
949

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಹತ್ತು ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ. ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಾರಿ ಜಿಲ್ಲಾಮಟ್ಟದ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ: 21/09/2017

ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ schooleducation.kar.nic.in ಮುಖಾಂತರ ಅರ್ಜಿ ಸಲ್ಲಿಸಬೇಕು.

ಒಂದಕ್ಕಿಂತ ಹಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪರೀಕ್ಷಾ ಶುಲ್ಕವನ್ನು ಹೆಚ್ಚುವರಿಯಾಗಿ ಕಟ್ಟಬೇಕು. ಎಲ್ಲಾ ವಿಷಯ ಹಾಗೂ ಮಾಧ್ಯಮದ ಹುದ್ದೆಗಳಿಗೆ ಒಂದೇ ಅರ್ಜಿ ನಮೂನೆಯನ್ನು ನಿಗದಿಪಡಿಸಲಾಗಿದೆ.

ಪರಿಶಿಷ್ಟ ಜಾತಿ, ವರ್ಗ, ಪ್ರವರ್ಗ-1ರ ಅಭ್ಯರ್ಥಿಗಳು ಒಂದು ಹುದ್ದೆಗೆ 250, ಎರಡು ಹುದ್ದೆಗೆ 400, ಮೂರು ಹುದ್ದೆಗೆ ಅರ್ಜಿ ಸಲ್ಲಿಸಲು 550 ರೂ. ಶುಲ್ಕ ಕಟ್ಟಬೇಕು. ಇತರ ಅಭ್ಯರ್ಥಿಗಳು ಕ್ರಮವಾಗಿ 500, 750, 1000 ರೂ. ಶುಲ್ಕ ಕಟ್ಟಬೇಕು.

ಟಿಇಟಿ ಪರೀಕ್ಷೆ ತೇರ್ಗಡೆಯಾಗಿದ್ದಲ್ಲಿ ಅಭ್ಯರ್ಥಿಗಳು ಒಂದೇ ಅರ್ಜಿಯಲ್ಲಿ ಒಂದಕ್ಕಿಂತ ಹೆಚ್ಚು ವಿಷಯದ ಹುದ್ದೆಗಳಿಗೆ ಅರ್ಜಿ ಸಲ್ಲಿಬಹುದಾಗಿದೆ.