NEET ಪರೀಕ್ಷೆ ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ರಾಜ್ಯಸರ್ಕಾರದ ಮನವಿಗೆ ಮಾನವ ಸಂಪನ್ಮೂಲ ಸಚಿವಾಲಯ ಶೀಘ್ರ ನಿರ್ಧಾರಕ್ಕೆ ಭರವಸೆ..

0
317

ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲಾದ NEET ಪರೀಕ್ಷೆ ನಿನ್ನೆ ನಡೆಯಿತು ಈ ಪರೀಕ್ಷೆಯಲ್ಲಿ ನೂರಾರು ಪ್ರತಿಭಾವಂತ ವಿದ್ಯಾರ್ಥಿಗಳು ಗೈರಾಗಿದ್ದರು ಯಾಕೆ ಅಂತ ನೋಡಿದರೆ, ಒಂದೇ ಕಾರಣ ಹಂಪಿ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 16591) ಬೆಳಗ್ಗೆ ಏಳು ಗಂಟೆಗಾಗಲೇ ಬೆಂಗಳೂರು ತಲುಪಬೇಕಾಗಿದ್ದ ಗಾಡಿ ಸುಮಾರು ಎರಡೂವರೆ ಗಂಟೆ ತಡವಾಗಿ ಆಗಮಿಸಿತ್ತು. ಆದರಿಂದ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ವಂಚಿತರಾಗಿದ್ದು ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಬೇಕೆಂದು ಶಿಫಾರಸು ಮಾಡುವುದಾಗಿ ರೇಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Also read: ರಫೇಲ್ ವಿಮಾನ ಖರೀದಿ ವಿಚಾರದಲ್ಲಿ ರಾಹುಲ್‌ ಆರೋಪಕ್ಕೆ ತಿರುಗೇಟು ನೀಡಿದ ಅಂಬಾನಿ; ಯುಪಿಎ ಅವಧಿಯಲ್ಲಿ ನಮಗೆ 1 ಲಕ್ಷ ಕೋಟಿ ರೂ. ಗುತ್ತಿಗೆ..

ಹೌದು ನೀಟ್ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳು ಹಲವು ಗೊಂದಲಗಳನ್ನು ಎದುರಿಸಬೇಕಾಯಿತು. ಒಂದು ಕಡೆ ಪರೀಕ್ಷೆ ಬರೆಯಲು ಬರುತ್ತಿದ್ದ ನೂರಾರು ವಿದ್ಯಾರ್ಥಿಗಳಿದ್ದ ರೈಲು ತಡವಾದರೆ, ಮತ್ತೊಂದು ಕಡೆ ಪರೀಕ್ಷಾ ಕೇಂದ್ರವನ್ನೇ ಬದಲಾಯಿಸಿದ್ದರಿಂದ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದು, ಬಳ್ಳಾರಿ, ಕೊಪ್ಪಳ, ಗದಗ ಸೇರಿ ಹಲವು ಜಿಲ್ಲೆಯ ವಿದ್ಯಾರ್ಥಿಗಳು ಹೊಸಪೇಟೆ-ಗುಂಟಕಲ್​ ಮಾರ್ಗದ ಹಂಪಿ ಎಕ್ಸ್​​​ಪ್ರೆಸ್ ರೈಲು ಹತ್ತಿದ್ದರು. ಆದರೆ ಆ ರೈಲು ಕಡೂರಿನ ಬಳ್ಳೆಕೆರೆಯಲ್ಲಿ ಮಾರ್ಗ ಬದಲಾಯಿಸಿತ್ತು. ರೈಲು ಹಳಿ ಸಮಸ್ಯೆಯಿಂದಾಗಿ ಅರಸೀಕೆರೆ ಮಾರ್ಗವಾಗಿ ರೈಲು ಹೊರಟಿತ್ತು. ರೈಲು ಮಾರ್ಗ ಬದಲಾಯಿಸಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದರು. ರೈಲ್ವೆ ಅಧಿಕಾರಿಗಳನ್ನು ವಿಚಾರಿಸಿದಾಗ ರೈಲು ಹಳಿ ಸಮಸ್ಯೆ ಇರುವುದಾಗಿ ತಿಳಿಸಿದರು. ನಂತರ ವಿದ್ಯಾರ್ಥಿಗಳು ಮತ್ತು ರೈಲ್ವೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು.

ಮರು ಪರೀಕ್ಷೆಗೆ ಮನವಿ?

ನೀಟ್​​ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವಂತೆ ಸಿಎಂ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ, ರೈಲ್ವೆ ಸಚಿವ ಪೀಯೂಶ್​​ ಗೋಯಲ್​, ಪ್ರಕಾಶ್​ ಜಾವ್ಡೇಕರ್​ ಅವರಿಗೆ ಮನವಿ ಮಾಡಿದ್ದಾರೆ. 15 ಲಕ್ಷಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್ ಪರೀಕ್ಷೆ) ಬರೆದಿದ್ದಾರೆ. ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸಿದ್ದ ಈ ಪರೀಕ್ಷೆ ಭಾರತದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಇರುವ ಏಕೈಕ ಪರೀಕ್ಷೆಯಾಗಿದೆ. ಭಾರತದಾದ್ಯಂತ ಇಂದು ಒಟ್ಟು 154 ನಗರಗಳಲ್ಲಿ ಆಯ್ದ ಕೇಂದ್ರಗಳಲ್ಲಿ 2ರಿಂದ 5 ಗಂಟೆವರೆಗೆ ನಡೆಸಲಾಗಿದೆ.

Also read: ಚೌಕಿದಾರ್ ಚೋರ್ ಹೇಳಿಕೆಗೆ ಸುಪ್ರೀಂ ಕ್ಷಮೆ ಕೇಳಿದರು ಮತ್ತೆ ಮೋದಿಗೆ ಚೋರ್ ಹೇ ಅನ್ನೋದು ಬಿಡಲ್ಲ; ಎಂದ ರಾಹುಲ್ ಮತ್ತೆ ವಿವಾದಕ್ಕೆ ಗುರಿಯಾಗ್ತಾರ??

ಶೀಘ್ರದಲ್ಲೇ ಸೂಕ್ತ ತೀರ್ಮಾನ:

ಸರ್ಕಾರದ ಮುಖ್ಯಕಾರ್ಯದರ್ಶಿ ಹಾಗೂ ಉನ್ನತ ಶಿಕ್ಷಣ ಇಲಾಖೆ ಜೊತೆ ಮಾತುಕತೆ ನಡೆದಿದೆ. ಮುಖ್ಯಮಂತ್ರಿ ಸೂಚನೆಯಂತೆ ಮುಖ್ಯ ಕಾರ್ಯದರ್ಶಿಗಳು ಮಾನವ ಸಂಪನ್ಮೂಲ ಇಲಾಖೆಯೊಂದಿಗೆ ಸಿ.ಎಸ್​ ವಿಜಯ್​ ಭಾಸ್ಕರ್​ ಮಾತುಕತೆ ನಡೆಸಿದ್ದಾರೆ. ಈ ಘಟನೆಯಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಕಾರ್ಯದರ್ಶಿಗಳು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಅತೀ ಶೀಘ್ರದಲ್ಲೇ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳ ಸಿ.ಎಸ್​​ ವಿಜಯ್ ಭಾಸ್ಕರ್​​ಗೆ ಮನವಿಗೆ ಮಾನವ ಸಂಪನ್ಮೂಲ ಇಲಾಖೆ ಭರವಸೆ ನೀಡಿದೆ.

ಮಾಜಿ ಸಿಎಂ ಗರಂ:

ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ. ರೈಲು ವಿಳಂಬದಿಂದಾಗಿ ಕರ್ನಾಟಕದ ನೂರಾರು ವಿದ್ಯಾರ್ಥಿಗಳು ನೀಟ್​ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಕೇಂದ್ರ ಸಚಿವರಾದವರಿಗೆ ಈ ಬಗ್ಗೆ ಜವಾಬ್ದಾರಿ ಇರಬೇಕು. ಕೆಲ ದಿನಗಳವರೆಗೆ ಸಚಿವ ಪಿಯೂಷ್​ ಗೋಯಲ್​ ಅವರಿಗೆ ಸರಿಯಾಗಿ ಕೆಲಸ ಮಾಡುವಂತೆ ತಿಳಿಸಿ ಎಂದು ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಪರೀಕ್ಷೆಯಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಮತ್ತೊಮ್ಮ ಪರೀಕ್ಷೆ ಬರೆಯಲು ಅವಕಾಶ ಕೊಡುವಂತೆ ತಿಳಿಸಿದ್ದಾರೆ.