2018 ಡಿಸೆಂಬರ್ ವೇಳೆಗೆ ಪಾಕ್ ಗಡಿ ಶಾಶ್ವತ ಬಂದ್ ಗೆ ಕೇಂದ್ರ ಸರ್ಕಾರ ಸಿದ್ಧತೆ

0
621

ಗಡಿಯಲ್ಲಿ ಪದೇಪದೆ ಆಗುತ್ತಿರುವ ಕದನ ವಿರಾಮ ಉಲ್ಲಂಘನೆ ಹಾಗೂ ಉಗ್ರರ ಉಪಟಳಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ೨೦೧೮ರ ಡಿಸೆಂಬರ್ ವೇಳೆಗೆ ಪಾಕಿಸ್ತಾನ ಗಡಿಯನ್ನು ಶಾಶ್ವತವಾಗಿ ಮುಚ್ಚ ಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಗಡಿಯ ನಾಲ್ಕು ರಾಜ್ಯಗಳ ಭದ್ರತಾ ಅಧಿ ಕಾರಿಗಳು ಹಾಗೂ ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಾಂತ್ರಿಕ ಸಮಸ್ಯೆ, ಬೇಲಿ ಅಳವಡಿಕೆ ಹಾಗೂ ಕೇಂದ್ರ ಹಾಗೂ ರಾಜ್ಯ ಸರಕಾರಗಳ‌ ಭದ್ರತಾ ಸೇವೆ ಬಳಸಿಕೊಳ್ಳುವುದೂ ಸೇರಿದಂತೆ ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದರು.

ಇದು ಹೊಸ ಮಾದರಿಯ ಭದ್ರತಾ ವ್ಯವಸ್ಥೆ ಅಗಲಿದ್ದು, ಗಡಿಯ ಎಲ್ಲಾ ರಾಜ್ಯಗಳ ಜೊತೆ ಚರ್ಚಿಸಿ ತೀರ್ಮಾನಿಸ ಲಾಗುವುದು ಎಂದು ರಾಜನಾಥ್ ಸಿಂಗ್ ವಿವರಿಸಿದರು.