ಸಂತ ಶಿಶುನಾಳ ಶರೀಫ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ

0
872

 

ಶಿಶುನಾಳ ಶರೀಫ ಹಾವೇರಿ ಜಿಲ್ಲಯ ಶಿಗ್ಗಾವಿ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಕ್ರಿ.ಶ. 1819 ಮಾರ್ಚ್ 7ರಂದು ಜನಿಸಿದರು. ಇವರ ತಂದೆ ದೇವಕಾರ ಮನೆತನದ ಇಮಾಮ ಹಜರತ ಸಾಹೇಬರು ಹಾಗು ತಾಯಿ ಹಜ್ಜೂಮಾ. ಇವರ ಪೂರ್ಣ ಹೆಸರು ಮಹಮ್ಮದ ಶರೀಫ. ಮುಲ್ಕಿ ಪರೀಕ್ಷೆ ಪಾಸು ಮಾಡಿದ ಬಳಿಕ ಶರೀಫರು ಕೆಲ ಕಾಲ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರೆಂದು ಕೆಲಸ ಮಾಡಿದರು.

ಶಿಶುನಾಳ ಶರೀಫರು ತತ್ವಪದಗಳ ರೂವಾರಿ. ದೇವಕಾರ ಮನೆತನದವರು. ಕನ್ನಡದ ಖ್ಯಾತ ಹಾಡುಗಾರ ಶ್ರೀ ಅಶ್ವಥ್ಥರು ಇವರ ಅನೇಕ ರಚನೆಗಳನ್ನು ಹಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಖ್ಯಾತ ಕಲಾವಿದ ರಘು ದೀಕ್ಷಿತ್ ಅವರು ಶಿಶುನಾಳ ಶರೀಫರ ಕೆಲ ಗೀತೆಗಳಿಗೆ ವಿಶೇಷ ಶೈಲಿಯ ಸಂಗೀತ ಸಂಯೋಜನೆ ನೀಡಿ ದೇಶದಾದ್ಯಂತ ಪ್ರಖ್ಯಾತಿ ಪಡೆದಿದ್ದಾರೆ.

ಶರೀಫರು ಹಾಡಿದ ಪದಗಳು ಧಾರವಾಡ ಜಿಲ್ಲೆಯ ಆಡುಭಾಷೆಯ ಶೈಲಿಯಲ್ಲಿವೆ. ಈ ಪದಗಳಲ್ಲಿ ಕೆಲವು ದೇವತಾಸ್ತುತಿಯ ಪದಗಾಳದರೆ, ಇನ್ನು ಕೆಲವು ಪದಗಳು ಕನ್ನಡದಲ್ಲಿ ಇದ್ದರೂ ಸಹ ಕೆಲವು ಪದಗಳು ಉರ್ದು ಭಾಷೆಯಲ್ಲಿವೆ.

ತುಂಬು ಜೀವನವನ್ನು ನಡೆಸಿದ ಶರೀಫರ ಮರಣದ ತರುವಾಯ ಅವರ ಅಂತ್ಯಕ್ರಿಯೆಯು ಹಿಂದು ಹಾಗೂ ಮುಸಲ್ಮಾನ ಭಕ್ತರ ಸಮ್ಮುಖದಲ್ಲಿ ನೆರವೇರಿತು.