ಶಿವ ಪರಿವಾರ

0
3119

ನಂದಿಯಿಲ್ಲದ ಶಿವಾಲಯವಿಲ್ಲ. ಇವನು ಶಿವಗಣಗಳ ನಾಯಕ. ವೃಷಭವು ಕಾಮದ – ವೀರತ್ವದ ದ್ಯೋತಕ. ಶಿವನು ಇದನ್ನೇ ವಾಹನವನ್ನಾಗಿ ಮಾಡಿಕೊಂಡಿದ್ದಾನೆಂದರೆ ಕಾಮವನ್ನು ಜಯಿಸಿ ತನ್ನ ಪ್ರಭುತ್ವವನ್ನು ಸ್ಥಾಪಿಸಿದ್ದಾನೆಂದು ಅರ್ಥ.

shiva-family
ನಂದಿಯನಂತರ ಬರುವ ಪ್ರಮುಖ ಭೃಂಗಿ. ಈತನು ಶಿವನಲ್ಲಿ ಏಕನಿಷ್ಠೆಯ ಭಕ್ತ. ಪಾರ್ವತಿಯು ಶಿವನಲ್ಲಿ ಐಕ್ಯವಾಗಿ, ಶಿವ ಅರ್ಧನಾರೀಶ್ವರ ರೂಪ ಪಡೆದಾಗಲೂ ಭೃಂಗಿ (ದುಂಬಿ) ಭೃಂಗದ ರೂಪ ಧರಿಸಿ ಶಿವನಿಗೆ ಪ್ರದಕ್ಷಿಣೆ ಬರುತ್ತ ಅರ್ಧನಾರೀಶ್ವರನನ್ನೇ ಮಧ್ಯದಲ್ಲಿ ಕೊರೆದನಂತೆ. ಆದ್ದರಿಂದಲೇ ಇವನಿಗೆ `ಭೃಂಗ’ ಎಂದು ಹೆಸರು ಬಂತೆಂದು ಪ್ರತೀತಿ.

shiva-f
ಶಿವನೊಂದಿಗೆ ನಿಕಟ ಸಂಬಂಧ ಹೊಂದಿದ ಇನ್ನೊಬ್ಬ ದೇವತೆಯೆಂದರೆ ವೀರಭದ್ರ. ದಕ್ಷ ಸಂಹಾರಕ್ಕಾಗಿ ನಿಯುಕ್ತನಾದ ಶಿವನ ಶಕ್ತಿಯ ಸ್ವರೂಪ. ವೀರಭದ್ರನ ಅನಂತರ ಬರುವ ದೇವತೆ ಚಂಡೇಶ್ವರ. ಇವನು ಮನುಷ್ಯವರ್ಗದ ಮಹಾಭಕ್ತ. ಶಿವನ ಇತರ ಅನುಚರರೆಂದರೆ ಅವನ ಗಣಗಳು. ಇವು ಹೆಚ್ಚಾಗಿ ಪ್ರಮಥ ಅಥವಾ ಭೂತಗಣಗಳೆಂದು ಪ್ರಸಿದ್ಧ.