ವಿದ್ಯಾ ದೇಗುಲವನ್ನು ಬಿಡದ ಸರ್ಕಾರ, ಸಿದ್ದರಾಮಯ್ಯ ಸರ್ಕಾರದಲ್ಲಿ ಸೂಟ್‍ಕೇಸ್ ಕೊಟ್ರೆನೇ ಕೆಲಸ ಹಂಪಿ ಕನ್ನಡ ವಿವಿ ಕುಲಪತಿ ಹೇಳಿಕೆ..!

0
379

ಹೌದು,ವಿದ್ಯಾ ದೇಗುಲವನ್ನು ಬಿಡದ ಸರ್ಕಾರ, ಸಿದ್ದರಾಮಯ್ಯ ಸರ್ಕಾರದಲ್ಲಿ ಸೂಟ್‍ಕೇಸ್ ಕೊಟ್ರೆನೇ ಕೆಲಸ ಹಂಪಿ ಕನ್ನಡ ವಿವಿ ಕುಲಪತಿ ಹೇಳಿಕೆ ನೀಡಿದ್ದಾರೆ.

ವಿಧಾನಸೌಧಕ್ಕೆ ಸೂಟ್‍ಕೇಸ್ ತುಂಬಾ ಹಣ ತುಂಬಿಕೊಂಡು ಹೋದ್ರೆ ಮಾತ್ರ ಕೆಲಸ ಆಗುತ್ತೆ. ಸಿಎಂ ಸಿದ್ದರಾಮಯ್ಯನವರ ಭರವಸೆ ಒಂದೆ ದಿನಕ್ಕೆ ಮಾತ್ರ ಸೀಮಿತ ಅಂತ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಮಲ್ಲಿಕಾ ಘಂಟಿ ಹೇಳಿಕೆ ನೀಡಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ವಿಧಾನಸೌಧಕ್ಕೆ ಸೂಟ್‍ಕೇಸ್ ತುಂಬಾ ಹಣ ತುಂಬಿಕೊಂಡು ಹೋದ್ರೆ ಮಾತ್ರ ಕೆಲಸವಾಗುತ್ತಂತೆ. ಹೀಗಾಗೇ ವಿಶ್ವ ವಿದ್ಯಾಲಯಗಳ ಅಭಿವೃದ್ಧಿಯಾಗುತ್ತಿಲ್ಲ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳೇ ಸ್ವಂತ ಸರ್ಕಾರದ ವಿರುದ್ಧ ಹೇಳಿಕೆಯನ್ನು ನೀಡಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಹಂಪಿ ಕನ್ನಡ ವಿಶ್ವ ವಿದ್ಯಾಲಯಕ್ಕೀಗ ಬೆಳ್ಳಿಹಬ್ಬದ ಸಂಭ್ರಮ. ಬೆಳ್ಳಿಹಬ್ಬದ ಅಂಗವಾಗಿ ಆಯೋಜಿಸಿದ್ದ ನುಡಿಹಬ್ಬವನ್ನು ಮಂಗಳವಾರ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ರು. ಈ ವೇಳೆ ಹಂಪಿ ಕನ್ನಡ ವಿವಿಯಲ್ಲಿನ ಸಿಬ್ಬಂದಿ ಅಧ್ಯಾಪಕರ ಕೊರತೆ ನೀಗಿಸುವ ಭರವಸೆಯನ್ನು ಸಿಎಂ ನೀಡಿದ್ರು. ಆದ್ರೆ ಎರಡನೇ ದಿನದ ವಿಚಾರ ಸಂಕಿರಣ ಸಮಾರಂಭದಲ್ಲಿ ಹಂಪಿ ಕನ್ನಡ ವಿವಿಯ ಕುಲಪತಿ ಡಾಕ್ಟರ್ ಮಲ್ಲಿಕಾ ಘಂಟಿ, ಸಿಎಂ ಸಿದ್ದರಾಮಯ್ಯ ಭರವಸೆಯ ಭಾಷಣದ ವಿರುದ್ಧವಾಗಿ ಮಾತನಾಡಿ ನೋವು ತೋಡಿಕೊಂಡಿದ್ದಾರೆ.