ವಿಶ್ವ ಪರಿಸರ ದಿನಾಚರಣೆಯ ಮಹತ್ವ ತಿಳಿದು, ಕಾಂಕ್ರೀಟ್ ಕಾಡಲ್ಲಿ ಮುಚ್ಚುತ್ತಿರುವ ಪರಿಸರವನ್ನು ಉಳಿಸುವುದು ನಮ್ಮೆಲರ ಹೊಣೆಯಲ್ಲವೆ??

0
754

ಹಸಿರೆ ಉಸಿರು ಎನ್ನುವುದು ಎಲ್ಲರಿಗೂ ತಿಳಿದರು ಪ್ರಪಂಚದ್ಯಾದಂತ ಪರಿಸರವನ್ನು ನಾಶಮಾಡಿ ಕಾಂಕ್ರೀಟ್ ಹಾಸಿಗೆಯನ್ನು ಹಾಕುತ್ತಿರುವ ಜನರು ಸ್ವಲ್ಪ ವರ್ಷಗಳಲ್ಲಿ ವಿನಾಶದ ಹಾದಿಯನ್ನು ತುಳಿಯುತ್ತಿದ್ದಾರೆ. ಇದಕ್ಕಾಗಿ ಹಲವರು ಹೋರಾಟ ಮಾಡಿ ಪ್ರತಿಯೊಬ್ಬರೂ ಗಿಡವನ್ನು ನೆಡಬೇಕು ಪರಿಸರದ ಬಗ್ಗೆ ವಿಶೇಷ ಖಾಳಜಿವಹಿಸಬೇಕು ಎನ್ನುವ ಕುರಿತು ಅದೆಷ್ಟೋ ಜಾಗೃತಿಗಳು, ಹೋರಾಟಗಳು ನಡೆಯಿತ್ತಾನೆ ಇವೆ. ಅದಕ್ಕಾಗಿಯೇ ಜೂನ್ 5 ರಂದು ವಿಶ್ವ ಪರಿಸರ ದಿನವಾಗಿ ಆಚರಣೆ ಮಾಡುತ್ತಾರೆ. ಇದು 1972 ರಲ್ಲಿ ವಿಶ್ವಸಂಸ್ಥೆಯ ಘೋಷಣೆಯ ನಂತರ, 1973 ಜೂನ್ 5 ರಿಂದ ಪ್ರತಿವರ್ಷ ಈ ದಿನವನ್ನು ವಿಶ್ವ ಪರಿಸರ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಪರಿಸರ ದಿನಾಚರಣೆ ಮಹತ್ವ;

ಭೂಮಿಯಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಪರಿಸದ ಬಗ್ಗೆ ಅರಿವು ಮೂಡಿಸುವುದು ಮುಖ್ಯವಾಗಿದೆ. ಅದರಂತೆ ಎಲ್ಲರಿಗೂ ಪರಿಸರ ಸಂಬಂಧಿತ ವಿಷಯಗಳು ತಿಳಿಯಬೇಕೆಂಬುದೇ ಆಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಸರದ ಸ್ಥಿತಿ ಗತಿ ತಿಳಿಯುವುದು, ಸ್ವಚ್ಛ ಪರಿಸರದ ಅಗತ್ಯತೆಯನ್ನು ಅರಿಯುವುದು ಹಾಗೂ ಜನರಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಜಾಗತಿಕ ಮಟ್ಟದಲ್ಲಿ ಮೂಡಿಸುವಂತಹ ಘನೋದ್ದೇಶಗಳು ಪರಿಸರ ಆಚರಣೆಯಲ್ಲಿ ಸೇರಿವೆ. ಏಕೆಂದರೆ ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ , ವಿಜ್ಞಾನ, ತಂತ್ರಜ್ಞಾನದ‌ ಅಭಿವೃದ್ಧಿ ಎಂಬ ಹತ್ತು ಹಲವು ಕಾರಣಗಳಿಂದ ಇಂದು ಪರಿಸರಕ್ಕೆ ತೀವ್ರ ಧಕ್ಕೆಯುಂಟಾಗಿದ್ದು, ಪರಿಸರವನ್ನು ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದೂ ಆಗಿದ್ದು, ಈ ಕರ್ತವ್ಯವನ್ನು ನಮಗೆಲ್ಲರಿಗೂ ನೆನಪಿಸುವ ಮಹತ್ವದ ಉದ್ದೇಶ ಕೂಡಾ ಈ ಪರಿಸರ ದಿನಾಚರಣೆ ಆಗಿದೆ.

ಪರಿಸರದ ಬಗೆಗಿನ ಕಾಳಜಿಯನ್ನೇ ಮರೆತು ಸಾಗುವ ಪರಿ.. ಇದು ನಾವು ಆಚರಿಸುತ್ತಿರುವ ಪರಿಸರ ದಿನಾಚರಣೆ ಪರಿಸರ, ಪಕೃತಿ ನಮಗೆ ಎಲ್ಲವನ್ನೂ ನೀಡುತ್ತದೆ. ಅಗಣಿತವಾದ ಅಮೂಲ್ಯ ಕೊಡುಗೆಗಳನ್ನು ನೀಡುತ್ತದೆ. ಪ್ರತಿಯೊಂದು ಜೀವ ಸಂಕುಲಕ್ಕೆ ಅಗತ್ಯ, ಅನಿವಾರ್ಯ ಆದರೆ ನಾವಿಂದು ಪರಿಸರಕ್ಕಾಗಿ, ಏನನ್ನು ಕೊಟ್ಟಿದ್ದೇವೆ.. ಕೊಡುತ್ತಿದೇವೆ ಎಂಬುದನ್ನು ಪ್ರತಿಯೊಬ್ಬ ಮಾನವನು ತನಗೆ ತಾನೇ ಹಾಕಿಕೊಳ್ಳಬೇಕಾದ ಪ್ರಶ್ನೆ. ಉತ್ತರ ಮಾತ್ರ ನಗಣ್ಯ. ಕೊನೆ ಪಕ್ಷ ಇರುವ ಪರಿಸರವನ್ನು ರಕ್ಷಿಸಿಕೊಳ್ಳುವ ಬಗ್ಗೆ ಕಿಂಚಿತ್ತೂ ಯೋಚಿಸಲೂ ಆಗದಷ್ಟು ನಿಷ್ಕಾಳಜಿ. ತಲುಪಿದ ಜನರು ಅದರ ಪರಿಣಾಮವಾಗಿ ಹೃದಯ ಸಂಬಂಧಿ, ಉಸಿರಾಟ ಸಂಬಂಧಿ, ಅಪೌಷ್ಟಿಕತೆಯಂತಹ ಅನೇಕ ದುಷ್ಪರಿಣಾಮಗಳನ್ನು ಎದುರಿಸುತ್ತಿದ್ದೇವೆ.

ಜೂನ್ ತಿಂಗಳೇ ಪರಿಸರ ಆಚರಣೆಗೆ ಕಾರಣ;

ಪರಿಸರ ದಿನಾಚರಣೆಯ ಈ ದಿನ ಪ್ರಪಂಚದಲ್ಲಿ ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುತ್ತಾರೆ. ಹೀಗೆ ನೆಟ್ಟ ಅಪಾರ ಗಿಡಗಳಿಗೆ ನೀರು ಹಾಕುವುದು ಕಷ್ಟ ಸಾಧ್ಯವಾಗಿದೆ. ಅದಕ್ಕಾಗಿ ನೀರಿನ ಅಭಾವವನ್ನು ಸರಿದೂಗಿಸಲು ಜೂನ್ ತಿಂಗಳನ್ನು ಆಯ್ಕೆ ಮಾಡಿದೆ, ಏಕೆಂದರೆ ಜೂನ್ ತಿಂಗಳಿಂದ ಮಳೆ ಶುರುವಾಗಲಿದ್ದು ನೆಟ್ಟ ಗಿಡಗಳು ಬೆಳೆಯಲು ಸಹಾಯವಾಗುತ್ತೆ ಎನ್ನುವ ಯೋಚನೆಯಿಂದ ಈ ದಿನವನ್ನು ಇಂದೇ 1972 ರಲ್ಲಿ ವಿಶ್ವಸಂಸ್ಥೆಯ ಘೋಷಣೆ ಮಾಡಿತು ಅಂದಿನಿಂದ ಪರಿಸರ ತಾಯಿಯನ್ನು ಬೆಳೆಸುತ್ತ ಬರುತ್ತಿದ್ದಾರೆ. ಇನ್ನೂಂದು ರೀತಿಯಲ್ಲಿ ನೋಡಿದರೆ. ಜಾಗತಿಕ ಮಟ್ಟದಲ್ಲಿ ಸುಮಾರು ನೂರಕ್ಕಿಂತ ಹೆಚ್ಚಿನ ರಾಷ್ಟ್ರಗಳು ಜೂನ್ ಐದನ್ನು ಪರಿಸರ ದಿನವನ್ನಾಗಿ ಆಚರಿಸುವುದರಿಂದಲೇ ಇದು ವಿಶ್ವ ಪರಿಸರ ದಿನಾಚರಣೆ ಎನಿಸಿಕೊಂಡಿದೆ.

ಕಾಂಕ್ರೀಟ್ ನಿಂದ ಪರಿಸರಕ್ಕೆ ದಕ್ಕೆ;

ಜಗತ್ತಿನಲ್ಲಿ ಕಾಂಕ್ರೀಟ್ ಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು, ಕಾಡು ಕಡಿದು ಕಾಂಕ್ರೀಟ್ ರಸ್ತೆ ಮಾಡುತ್ತಿದ್ದಾರೆ, ಹೊಲಗದ್ದೆ ಕೆರೆಗಳನ್ನು ಅಳಿಸಿ ದೊಡ್ಡ ದೊಡ್ಡ ಮನೆಗಳನ್ನು ನಿರ್ಮಿಸುತ್ತಿದ್ದಾರೆ. ಇದರಿಂದ ಮುಂದೆ ಹಲವು ತೊಂದರೆಗಳು ಅನುಭವಿಸುವುದು ಸತ್ಯವಾಗಿದ್ದು, ಪರಿಸರಕ್ಕೆ ಮಾನವನು ಕೊಡುತ್ತಿರುವ ಕೊಡುಗೆಯಾದರೂ ಏನು ಎಂಬುದನ್ನು ಮನವರಿಕೆ ಮಾಡಿಕೊಂಡು ಅದರ ಉಳಿವಿಗಾಗಿ ಜಾಗೃತನಾಗಬೇಕು. ನಮಗಿರುವ ಒಂದೇ ಒಂದು ಭೂಮಿಯನ್ನು, ಭೂಗ್ರಹವನ್ನು ಉಳಿಸಿಕೊಳ್ಳಲು ಒಂದೇ ದಿನ ಸಾಲದು ಪ್ರತಿದಿನವೂ ಪರಿಸರ ಸಂರಕ್ಷಣೆಗಾಗಿ ಕ್ರಮಗಳನ್ನು ಕೈಗೊಂಡು ಹಸಿರು ಕ್ರಾಂತಿ ಮಾಡಬೇಕಿದೆ.