ಅಕ್ಷಯ ತದಿಗೆಯ ದಿನ ದಾನ ಮಾಡುವುದರಿಂದ ಏನು ಲಾಭವಾಗುತ್ತದೆ?

0
513

ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ. ಅಕ್ಷಯ ತೃತಿಯಾ ಇದು ಕೃತಯುಗದ ಮೊದಲನೆಯ ದಿನವೆಂದು ಪರಿಗಣಿಸಲಾಗುತ್ತದೆ. ಆ ದಿನದಲ್ಲಿ ಮಾಡಿದ ಎಲ್ಲ ಕರ್ಮಗಳು ಕೂಡ ಅಕ್ಷಯವಾಗುತ್ತದೆ ಎಂದು ಶಾಸ್ತ್ರ ಹೇಳಿದೆ. ಇದು ವರ್ಷಕ್ಕೆ ಒಂದು ಬಾರಿ ಬರುವ ದಿನ. ಇವತ್ತು ಅದಷ್ಟು ಒಳ್ಳೆಯ ಕೆಲಸಗಳನ್ನು ಮಾಡುವುದಕ್ಕೆ ಪ್ರಯತ್ನ ಮಾಡಬೇಕು. ಏಕೆಂದರೆ ಆ ದಿನ ಮಾಡಿದ ಕೆಟ್ಟ ಕೆಸಲಗಳು ಅವು ವರ್ಷ ಪೂರ್ತಿ ಮುಂದು ವರೆಯುತ್ತವೆ. ವಿಶೇಷವಾಗಿ ಇವತ್ತು ಗಂಗಾಸ್ನಾನ, ತೀರ್ಥದರ್ಶನ, ಹೋಮ-ಹವನಗಳನ್ನು ಮಾಡುವುದಿದೆ. ಅಕ್ಕಿಯ ದಾನ ಕೂಡ ಮಾಡಬೇಕು.

ಅಕ್ಷಯ ತದಿಗೆಯ ದಿನ ದಾನ ಮಾಡುವುದರಿಂದ ಏನು ಲಾಭವಾಗುತ್ತದೆ?

ದಾನ ಮಾಡುವುದರಿಂದ ಪುಣ್ಯವು ಸಿಗುತ್ತದೆ. ಅಕ್ಷಯ ತದಿಗೆಯ ದಿನ ಮಾಡಿದ ದಾನವು ಯಾವಾಗಲೂ ಕ್ಷಯವಾಗುವುದಿಲ್ಲ. ಅಕ್ಷಯ ತದಿಗೆಯ ದಿನ ಮಾಡಿದ ದಾನದಿಂದ ಬಹಳಷ್ಟು ಪುಣ್ಯ ಸಿಗುತ್ತದೆ. ಬಹಳಷ್ಟು ಪುಣ್ಯವು ಲಭಿಸುವುದರಿಂದ ವ್ಯಕ್ತಿಯ ಪುಣ್ಯದ ಸಂಗ್ರಹವು ಹೆಚ್ಚಾಗುತ್ತದೆ. ಯಾವುದಾದರೊಂದು ಜೀವದ ಹಿಂದಿನ ಕರ್ಮಗಳು ಒಳ್ಳೆಯದಾಗಿದ್ದರೆ ಅವನ ಪುಣ್ಯದ ಸಂಗ್ರಹವು ಹೆಚ್ಚಾಗುತ್ತದೆ. ಇದರಿಂದ ಅವನಿಗೆ ಸ್ವರ್ಗಪ್ರಾಪ್ತಿಯಾಗಬಹುದು. ಸಾಧಕರಿಗೆ ಪುಣ್ಯವನ್ನು ಪ್ರಾಪ್ತಿಮಾಡಿಕೊಂಡು ಸ್ವರ್ಗಪ್ರಾಪ್ತಿ ಮಾಡಿಕೊಳ್ಳುವುದಿರುವುದಿಲ್ಲ, ಸಾಧಕ ರಿಗೆ ಈಶ್ವರಪ್ರಾಪ್ತಿ ಮಾಡಿಕೊಳ್ಳುವುದಿರುತ್ತದೆ. ಆದುದರಿಂದ ಸಾಧಕರು ಸತ್ಪಾತ್ರರಿಗೆ ದಾನ ಮಾಡಬೇಕು.

ಎಲ್ಲಿ ಅಧ್ಯಾತ್ಮದ ಪ್ರಸಾರದ ಜೊತೆಗೆ ರಾಷ್ಟ್ರ ಮತ್ತು ಧರ್ಮಗಳಿಗಾಗಿ ಕಾರ್ಯ ಮಾಡಲಾಗುತ್ತದೆಯೋ, ಇಂತಹ ಸತ್ಕಾರ್ಯಗಳಿಗೆ ದಾನ ಮಾಡುವುದೆಂದರೆ ಸತ್ಪಾತ್ರೇ ದಾನ. ಸತ್ಪಾತ್ರರಿಗೆ ದಾನ ಮಾಡುವುದರಿಂದ ದಾನ ಮಾಡುವವನಿಗೆ ಪುಣ್ಯವು ಸಿಗದೆ ದಾನದ ಕರ್ಮವು ಅಕರ್ಮ ಕರ್ಮವಾಗುತ್ತದೆ. ಇದರಿಂದ ಅವನ ಆಧ್ಯಾತ್ಮಿಕ ಉನ್ನತಿಯಾಗುತ್ತದೆ. ಆಧ್ಯಾತ್ಮಿಕ ಉನ್ನತಿಯಾಗುವುದರಿಂದ ಸಾಧಕನು ಸ್ವರ್ಗಲೋಕಕ್ಕೆ ಹೋಗದೆ ಉಚ್ಚಲೋಕಕ್ಕೆ ಹೋಗುತ್ತಾನೆ.