ಕರ್ನಾಟಕ ಹಾಗೂ ಕನ್ನಡದ ಈ ಸಂಗತಿಗಳನ್ನು ತಿಳಿದು ನವೆಂಬರ್ ಕನ್ನಡಿಗರಾಗುವುದನ್ನು ಬಿಟ್ಟು ನಂಬರ್ ಒನ್ ಕನ್ನಡಿಗರಾಗಿ !!!

0
1237

ಸ್ವಾತಂತ್ರದ ನಂತರ, ಒಡೆಯರ್ ಮಹಾರಾಜ ಭಾರತದ ಭಾಗವಾಗಲು ಸಮ್ಮತಿಸಿದರು. ೧೯೫೦ರಲ್ಲಿ , ಮೈಸೂರು ಭಾರತದ ರಾಜ್ಯವಾಯಿತು, ಹಾಗು ಪೂರ್ವ ಮಹಾರಾಜ ೧೯೭೫ರ ವರಗೆ ಅದರ ರಾಜಪ್ರಮುಖ , ಅಥವಾ ರಾಜ್ಯಪಾಲರಾದರು. ”ಏಕೀಕರಣ” ಚಳುವಳಿ ೧೯ನೆಯ ಶತಮಾನಡ ಎರಡನೇ ಭಾಗದಲ್ಲಿ ಶುರ್ವಾಗಿ ೧೯೫೬ ರಾಜ್ಯ ಪುನಸ್ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು, ಇದರಿಂದ ಕೂರ್ಗ್, ಮದ್ರಾಸ್, ಹೈದರಾಬಾದ್, ಹಾಗು ಬಾಂಬೆ ರಾಜ್ಯದ ಭಾಗಗಳನ್ನು ಮೈಸೂರು ರಾಜ್ಯಕ್ಕೆ ಸೇರ್ಪಡಿಸಲಾಯಿತು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ೧೯೭೩ರಲ್ಲಿ ಪುನರ್ನಾಮಕರಣ ಮಾಡಲಾಯಿತು. ಮೈಸೂರು ರಾಜ್ಯವನ್ನು ನವೆಂಬರ್ ೧, ೧೯೫೬ರಲ್ಲಿ ರಚನೆಯಾಯಿತು ಅಂದಿನಿಂದ ನವೆಂಬರ್ ೧ ನ್ನು ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

693px-karnataka_1956_reorg-svg

★★★ ಕರ್ನಾಟಕ ನಮ್ಮ ರಾಜ್ಯ ★★★

1.ಕರ್ನಾಟಕ ಎಂಬ ಹೆಸರಿನ ಪದದ ಬಳಕೆ ಪ್ರಪ್ರಥಮವಾಗಿ ಮಹಾಭಾರತದಲ್ಲಿ ಕಂಡು ಬಂದಿದೆ.

2.ಪ್ರಾಚೀನ ಕಾಲದಲ್ಲಿ ಕರ್ನಾಟಕವನ್ನು ಕರುನಾಡು(ಕಪ್ಪು ಮಣ್ಣಿನ ನಾಡು) ಎಂದು ಕರೆಯುತ್ತಿದ್ದರು.

3.ತಮಿಳು ಭಾಷೆಯ ಶಿಲಪ್ಪದಿಕಾರಂ ಕೃತಿಯಲ್ಲಿ ಕರುನಾಟ್ ಎಂಬ ಶಬ್ದದಿಂದ ಕರೆಯಲಾಗಿದೆ.

4.ಕರುನಾಟ್ ಎಂಬ ಔಚಿತ್ಯವಾದ ಪದವನ್ನು ತಮಿಳರು ನೀಡಿರುತ್ತಾರೆ.

5.ಬಾದಾಮಿಯ ಚಾಲುಕ್ಯರ ಸೈನ್ಯಕ್ಕೆ ಹಿಂದೆಯೇ ಹೇಳಿರುವಂತೆ ಕರ್ಣಾಣಬಲ ಎಂಬ ಹೆಸರಿತ್ತು.

6.ಇಂಡೋನೇಷಿಯಾದ ಜಾವಾ ದ್ವೀಪದಲ್ಲಿನ 12 ನೇಯ ಶತಮಾನದ ಒಂದು ಶಾಸನದಲ್ಲಿ ಕರ್ಣಾಟಕವನ್ನು ಉಲ್ಲೇಖಿಸಲಾಗಿದೆ.

7.ರಾಷ್ಟ್ರಕೂಟರ ಅಮೋಘವರ್ಷ ನೃಪತುಂಗನ ಕವಿ ಶ್ರೀ ವಿಜಯನ ಕವಿರಾಜಮಾರ್ಗದಲ್ಲಿ ಕರ್ನಾಟಕವು ಕಾವೇರಿ ನದಿಯಿಂದ ಗೋದಾವರಿ ನದಿಯವರೆಗೂ ವಿಸ್ತರಿಸಿತು ಎಂದು ಬರೆಯಲಾಗಿದೆ

8.ಭಾರತ ಸ್ವಾತಂತ್ರ್ಯ ಪಡೆದ ಸಂಸ್ಥಾನಗಳಲ್ಲಿ ಮೈಸೂರು ಎರಡನೇಯ ದೊಡ್ಡದಾದ ಸಾಮ್ರಾಜ್ಯವಾಗಿತ್ತು.

9.1953 ರಲ್ಲಿ ಮೈಸೂರು ಅರಸರ ಒಡೆತನದಲ್ಲಿದ್ದ 9 ಜಿಲ್ಲೆಗಳನ್ನು ಒಳಗೊಂಡ ಮೈಸೂರ ರಾಜ್ಯ ಉದಯವಾಯಿತು.

10.ನವೆಂಬರ್ 1956 ರಲ್ಲಿ ಭಾಷಾವಾರು ಪ್ರಾಂತ್ಯಗಳು ಕರ್ನಾಟಕದಲ್ಲಿ ವಿಲಿನಗೊಂಡು ವಿಶಾಲ ಮೈಸೂರು ರಾಜ್ಯ ಉದಯವಾಯಿತು.

11.ಪ್ರತಿವರ್ಷ ನವೆಂಬರ್ 01, ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುವುದು.

12.1973 ನವೆಂಬರ್ 1 ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು, ಆಗ ಮುಖ್ಯಮಂತ್ರಿಯಾಗಿದ್ದವರು ದೇವರಾಜ್ ಅರಸ್

13.ಕರ್ನಾಟಕ ಎಂಬ ಪದವನ್ನು ನೀಡಿದವರು ಆಲೂರು ವೆಂಕಟರಾಯರು.

ಕನ್ನಡವೇ ಸತ್ಯ ಕನ್ನಡವೇ ನಿತ್ಯ

ಇಂತಿ

ಸಾಮಾನ್ಯ ಕನ್ನಡತಿ