ನಿಮ್ಮ ಸಿಮ್ ಕಾರ್ಡ್ ಗೆ ಆಧಾರ್ ಜೊತೆ ಲಿಂಕ್ ಆಗಿಲ್ಲ ಅಂದ್ರೆ ನಿಮ್ಮ ಸಿಮ್ ಕಾರ್ಡ್ ರದ್ದಾಗಲಿದೆ ಬೇಗ ಲಿಂಕ್ ಮಾಡಿಕೊಳ್ಳಿ..!

0
984

ಹೌದು. ಆಧಾರ್ ಜತೆ ಸಿಮ್ ಕಾರ್ಡ್‍ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್‍ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಗ್ರಾಹಕರ ವೈಯಕ್ತಿಕ ಮಾಹಿತಿಗಳನ್ನು ಯಾವುದೇ ಕಾರಣಕ್ಕೂ ಮೊಬೈಲ್ ಆಪರೇಟರ್‍ಗಳು ಸಂಗ್ರಹಿಸುವಂತಿಲ್ಲ. ವೈಯಕ್ತಿಕ ಮಾಹಿತಿಗಳನ್ನು ಸಂಗ್ರಹಿಸಿಡುವುದು 2016ರ ಆಧಾರ್ ಕಾಯ್ದೆಯ ಅನ್ವಯ ಶಿಕ್ಷಾರ್ಹವಾಗಿದ್ದು, ಆರೋಪ ಸಾಬೀತಾದರೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.