ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ

0
1481

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ

ಬೆಂಗಳೂರು: ಎಸ್.ಎಂ.ಕೃಷ್ಣ ಅವರು ರಾಜೀನಾಮೆ ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ತಿಳಿಸಿರುವುದಾಗಿ ವರದಿ ವಿವರಿಸಿದೆ.

sm-krishna01_1

 

ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆನ್ನಲಾಗಿದೆ. ಕಾಂಗ್ರೆಸ್ ಸದಸ್ಯತ್ವ ನವೀಕರಣ ಮಾಡಿಕೊಳ್ಳುವ ಪ್ರಶ್ನೆ ಇಲ್ಲ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

 

ಬೆಳಿಗ್ಗೆ 11 ಗಂಟೆ ವೇಳೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿದ ಮಾಜಿ ಸಿಎಂ ಎಸ್ ಎಂ ಕೃಷ್ಣ ಸಕ್ರಿಯ ರಾಜಕಾರಣದಿಂದ ತಾನು ಯಾಕೆ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂಬ ಬಗ್ಗೆ ನಾಳೆ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಲಿದ್ದಾರೆ ಎಂದು ವರದಿ ಹೇಳಿದೆ.

ಫೆಬ್ರವರಿ 6ಕ್ಕೆ  ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಲಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರವರು ತಿಳಿಸಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಕಡೆಗಣಿಸಲಾಗ್ತಿದೆ ಅಂತ ಸೋನಿಯಾಗೆ ಪತ್ರ ಬರೆದಿರುವ ಎಸ್ ಎಂ ಕೆ ಎಂದು ರಾಜೀನಾಮೆ ನೀಡಿದ್ದಾರೆ.