ಕಾಲುಗಳ ಸೆಳೆತ ನಿಮ್ಮನ್ನು ತೀವ್ರವಾಗಿ ಭಾದಿಸುತ್ತಿದ್ದರೆ ಈ 6 ಸಲಹೆಗಳನ್ನು ತಪ್ಪದೆ ಪಾಲಿಸಿ….

0
3892

Kannada News | Health tips in kannada

ಬಾದಾಮಿ :

ನರಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆಗದೆ, ರಾತ್ರಿವೇಳೆ ಕಾಲುಗಳ ಸೆಳೆತ ಉಂಟಾಗುತ್ತದೆ. ವಿಟಮಿನ್ -ಇ ಅಧಿಕವಾಗಿರುವ ಬಾದಾಮಿ, ಪಾಲಕ್ ಹಾಗೂ ಬೆಣ್ಣೆ ಹಣ್ಣುಗಳನ್ನು ತಿನ್ನುವುದರಿಂದ , ನರಗಳಲ್ಲಿ ರಕ್ತ ಸಂಚಾರ ಸುಗಮವಾಗುತ್ತದೆ.

ನೀರು :

ನಿತ್ಯ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ಹಣ್ಣಿನ ರಸ ಬೆರೆಸಿ ಕುಡಿಯಬೇಕು, ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಯಮಿತವಾಗಿ ಬಾಯಾರಿಕೆಯಾದಾಗ ಕುಡಿಯುತ್ತಿರಿ ಇದರಿಂದ ನಿಮ್ಮ ಎಲ್ಲ ಸಮಸ್ಯೆಗಳು ದೂರವಾಗುತ್ತವೆ.

ಉಗಿ ಚಿಕಿತ್ಸೆ :

ಕಾಲು ಸೆಳೆತದಿಂದ ನೋವು ಕಡಿಮೆಯಾಗಲು ಉಗಿ ಪ್ಯಾಡ್ ಗಳನ್ನು ಉಪಯೋಗಿಸಿ. ಇದರಿಂದ ರಕ್ತ ಪ್ರಸಾರ ಹೆಚ್ಚಾಗುತ್ತದೆ. 15-20 ನಿಮಿಷಗಳ ಕಾಲ ಉಪಯೋಗಿಸಿದರೆ ಸಾಕು. ಬಿಸಿ ನೀರಿಗೆ ಸ್ವಲ್ಪ ಸೇಂದ್ರಿಯ ಉಪ್ಪು ಬೆರೆಸಿ ಶಾಖ ನೀಡುವುದರಿಂದಲೂ ನೋವು ಕಡಿಮೆಯಾಗುತ್ತದೆ.

ಗಾಂಧಪುರ ಎಣ್ಣೆ :

ಗಾಂಧಪುರ ಎಣ್ಣೆಯಲ್ಲಿ ಮೀಥೈಲ್ ಸಿಲಿಕೇಟ್ ಎಂಬ ಅಂಶ ವಿರುತ್ತದೆ ಅದು ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ. ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಅಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.

Watch:

ವಿದ್ಯುದ್ವಿಚ್ಛೇದ್ಯ :

ದೇಹಕ್ಕೆ ವಿದ್ಯುದ್ವಿಚ್ಛೇದ್ಯ ಅಥವಾ ಎಲೆಕ್ಟ್ರೋಲೈಟ್ ಗಳು ಅತ್ಯವಶ್ಯಕ. ಸೋಡಿಯಮ್, ಪೊಟಾಶಿಯಮ್, ಕ್ಯಾಲ್ಶಿಯಮ್ ಹಾಗೂ ಮೆಗ್ನೀಶಿಯಮ್ ಮುಂತಾದ ಖನಿಜಗಳ ಕೊರತೆಯಿಂದಾಗಿ ಕಾಲುಗಳ ಸೆಳೆತ ಉಂಟಾಗುತ್ತದೆ. ಅದರಿಂದ ಈ ಖನಿಜಗಳನ್ನು ಹೊಂದಿರುವ ಆಹಾರವನ್ನು ಸೇವಿಸುವುದು ಉತ್ತಮ.

ವ್ಯಾಯಾಮ :

ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಹಿಗ್ಗಿಸುವುದು ಅಥವಾ ಸ್ಟ್ರೆಚ್ ಮಾಡಬೇಕು, ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ, ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.

Also Read: ” ಪ್ರಾಯದ ಮಕ್ಕಳು : ಪೋಷಕರ ಪಾತ್ರ “!!